alex Certify
ಕನ್ನಡ ದುನಿಯಾ       Mobile App
       

Kannada Duniya

ಧರಣಿ ಕೈಬಿಟ್ಟ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್

ತಮ್ಮ ಸರ್ಕಾರದ ವಿರುದ್ಧ ಐಎಎಸ್ ಅಧಿಕಾರಿಗಳು ಅಸಹಕಾರ ಧೋರಣೆ ತೋರಿಸುತ್ತಿದ್ದಾರೆ. ಇದನ್ನು ಬಗೆಹರಿಸಲು ಲೆಫ್ಟಿನೆಂಟ್ ಗವರ್ನರ್ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ ಕಳೆದ 9 ದಿನಗಳಿಂದ ಧರಣಿ ನಡೆಸುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಕ್ಕಟ್ಟು ತಿಳಿಯಾದ ಪರಿಣಾಮ ತಮ್ಮ ಧರಣಿಯನ್ನು ಕೈಬಿಟ್ಟಿದ್ದಾರೆ.

ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದ ಲೆಫ್ಟಿನೆಂಟ್ ಗವರ್ನರ್ ಅಧಿಕಾರಿಗಳೊಂದಿಗೆ ನೀವೇ ತುರ್ತು ಸಭೆ ನಡೆಸಿ ಬಿಕ್ಕಟ್ಟು ಪರಿಹರಿಸಿಕೊಳ್ಳಿ ಎಂದು ಸೂಚನೆ ನೀಡಿರುವ ಬೆನ್ನಲ್ಲೇ ಕೇಜ್ರಿವಾಲ್, ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸಲು ಎಲ್ಲ ಸಹಕಾರ ನೀಡುವುದಾಗಿ ಅಧಿಕಾರಿಗಳಿಗೆ ಭರವಸೆ ನೀಡಿದ್ದರು.

ಮುಖ್ಯಮಂತ್ರಿಯವರ ಹೇಳಿಕೆಯನ್ನು ಸ್ವಾಗತಿಸಿರುವ ದೆಹಲಿ ಐಎಎಸ್ ಅಧಿಕಾರಿಗಳ ಒಕ್ಕೂಟ, ತಾವುಗಳು ಮಾತುಕತೆಗೆ ಸಿದ್ಧ ಎಂದು ಪ್ರತಿಕ್ರಿಯಿಸಿತ್ತು. ಹೀಗಾಗಿ ಕೇಜ್ರಿವಾಲ್ ಮತ್ತು ಅವರ ಸಂಪುಟದ ನಾಲ್ವರು ಸದಸ್ಯರು ಲೆಫ್ಟಿನೆಂಟ್ ಗವರ್ನರ್ ನಿವಾಸದಲ್ಲಿ ನಡೆಸುತ್ತಿದ್ದ ಧರಣಿಯನ್ನು ಅಂತ್ಯಗೊಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...