alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾಯ್ತು ರಾಜಕಾರಣಿಯ ಅಸಲಿಯತ್ತು

cpim kerala

ರಾಜಕಾರಣಿಗಳೆಂದರೆ ಭ್ರಷ್ಟಾಚಾರ ನಡೆಸುತ್ತಾರೆ. ಕಾಮಗಾರಿ, ಯೋಜನೆಗಳಲ್ಲಿ ಕೈಗೆ ಸಿಕ್ಕಷ್ಟು ಬಾಚಿಕೊಳ್ಳುತ್ತಾರೆ. ಜನರ ಕಣ್ಣಿಗೆ ಮಣ್ಣೆರಚಿ ಸಿಕ್ಕಿದ್ದಷ್ಟನ್ನು ದೋಚುತ್ತಾರೆ ಎಂಬ ಆರೋಪಗಳು ಆಗಾಗ ಸಾಮಾನ್ಯವಾಗಿ ಕೇಳಿ ಬರುತ್ತವೆ. ಇಷ್ಟು ದಿನ ಇಂತಹವುಗಳನ್ನು ಮಾತ್ರ ಕೆಲ ರಾಜಕಾರಣಿಗಳು ಮಾಡುತ್ತಿದ್ದರು.

ಇದೀಗ ಕೇರಳದಲ್ಲಿ ರಾಜಕೀಯ ಪಕ್ಷದ ಮುಖಂಡರೊಬ್ಬರು ಮನೆ ಕಳವು ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಸಿಪಿಐ-ಎಂ ಪಕ್ಷದ ಪ್ರಮುಖ ನಾಯಕನಾಗಿರುವ ರಾಘವನ್, ಮನೆ ಕಳವು ಪ್ರಕರಣದಲ್ಲಿ ಭಾಗಿಯಾದ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಯುಎಇ ನಲ್ಲಿ ನೆಲೆಸಿರುವ ಮಹಮ್ಮದ್ ಯೂನುಸ್ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಾಘವನ್, ಮನೆ ಬೀಗ ಮುರಿದು ಒಳಗೆ ಪ್ರವೇಶಿಸಿದ್ದಾರೆ. ಮನೆಯಲ್ಲಿದ್ದ ವಸ್ತುಗಳನ್ನೆಲ್ಲಾ ದೋಚಿದ್ದಾರೆ.

ಮಹಮ್ಮದ್ ಯೂನುಸ್ ಕುಟುಂಬದವರು ಮನೆಗೆ ಬಂದ ಸಂದರ್ಭದಲ್ಲಿ ಮನೆ ಬೀಗ ಮುರಿದಿದ್ದನ್ನು ಕಂಡು ಒಳಗೆ ಹೋಗಿ ನೋಡಿದ್ದಾರೆ. ಇಡೀ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಕಳ್ಳತನವಾಗಿವೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಕೇಸು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಾಗ ಸಿಸಿ ಕ್ಯಾಮೆರಾದಲ್ಲಿ ರಾಘವನ್ ಕಳವು ಮಾಡಿರುವುದು ಗೊತ್ತಾಗಿದೆ. ಸದ್ಯ ತಲೆಮರೆಸಿಕೊಂಡಿರುವ ರಾಘವನ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆ ಸಿಪಿಐ-ಎಂ ಪಕ್ಷದ ಸದಸ್ಯತ್ವದಿಂದ ಅವರನ್ನು ವಜಾಗೊಳಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...