alex Certify
ಕನ್ನಡ ದುನಿಯಾ       Mobile App
       

Kannada Duniya

ದೇವರನಾಡಿನಲ್ಲಿ ಮತ್ತೆ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ತಿರುವನಂತಪುರಂ: ವರುಣನ ರೌದ್ರಾವತಾರಕ್ಕೆ ದೇವರನಾಡು ಕೇರಳ ಸಂಪೂರ್ಣ ತತ್ತರಿಸಿಹೋಗಿದೆ. ಕಳೆದ 15 ದಿನಗಳಿಂದ ಉಂಟಾಗಿರುವ ಭಾರೀ ಪ್ರವಾಹಕ್ಕೆ ರಾಜ್ಯದ ಬಹುತೇಕ ಭಾಗಗಳು ಕೊಚ್ಚಿಹೋಗಿವೆ. ಸಾವಿನ ಸಂಖ್ಯೆ 357 ಕ್ಕೆ ಏರಿಕೆಯಾಗಿದೆ. ರಕ್ಷಣೆಗಾಗಿ ಜನರ ಆಕ್ರಂದನ ಮುಗಿಲು ಮುಟ್ಟಿದೆ. ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಕೇರಳದಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಇಂದು ಅಥವಾ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿದೆ. ಒಂದು ವೇಳೆ ಮತ್ತೆ ಮಳೆಯಾದರೆ ಸದ್ಯಕ್ಕೆ ವ್ಯವಸ್ಥೆ ಮಾಡಿರುವ ನಿರಾಶ್ರಿತ ಕೇಂದ್ರಗಳ ಮೇಲೂ ಪರಿಣಾಮ ಉಂಟಾಗುವ ಸಾಧ್ಯತೆಯಿದ್ದು, ಸಂತ್ರಸ್ತರು ಇನ್ನಷ್ಟು ಸಂಕಷ್ಟಕ್ಕೀಡಾಗುವ ಸಾಧ್ಯತೆಯಿದೆ. ಕಾಸರಗೋಡು ಮತ್ತು ತಿರುವನಂತಪುರ ಹೊರತುಪಡಿಸಿ ಬೇರೆಲ್ಲಾ ಜಿಲ್ಲೆಗಳಿಗೆ ತೀವ್ರ ಕಟ್ಟೆಚ್ಚರ ವಿಧಿಸಲಾಗಿದೆ.

ಕಳೆದ 9 ದಿನಗಳಲ್ಲೇ 197 ಜನರು ಪ್ರವಾಹಕ್ಕೆ ಸಿಕ್ಕಿ ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನ 33 ಜನ ಸಾವಿಗೀಡಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಂದ 10 ಸಾವಿರಕ್ಕೂ ಹೆಚ್ಚು ಜನರನ್ನು ಎನ್ಡಿಆರ್​ಎಫ್ ಸಿಬ್ಬಂದಿ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದೆ. ಒಟ್ಟು 58 ರಕ್ಷಣಾ ತಂಡ ಕಾರ್ಯಕ್ಕೆ ನಿಯೋಜಿತವಾಗಿದ್ದು ಅವರಲ್ಲಿ 55 ತಂಡಗಳು ಈಗಾಗಲೇ ಕಾರ್ಯನಿರತವಾಗಿವೆ. ಒಟ್ಟು 10,467 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿದ್ದಾರೆ. 159 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...