alex Certify
ಕನ್ನಡ ದುನಿಯಾ       Mobile App
       

Kannada Duniya

ಕೇರಳದಲ್ಲಿ ಮುಂದುವರೆದ ಮಳೆ: ಮುನ್ನಾರ್ ರೆಸಾರ್ಟ್ ನಲ್ಲಿ ಸಿಕ್ಕಿಬಿದ್ದ ಪ್ರವಾಸಿಗರು

ಕೇರಳದಲ್ಲಿ ಸತತ 24 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಕೆಲ ಪ್ರದೇಶಗಳಲ್ಲಿ ಭೂಕುಸಿತವುಂಟಾಗಿದ್ದು, 26ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಕೇರಳದ ಮುನ್ನಾರ್ ರೆಸಾರ್ಟ್ ಒಂದರಲ್ಲಿ 20 ವಿದೇಶಿಯರು ಸೇರಿದಂತೆ 60ಕ್ಕೂ ಹೆಚ್ಚು ಪ್ರವಾಸಿಗರು ಸಿಕ್ಕಿಬಿದ್ದಿದ್ದಾರೆ. ಮಳೆ ಹಾಗೂ ಭೂಕುಸಿತದಿಂದಾಗಿ ರೆಸಾರ್ಟ್ ಗೆ ಹೋಗುವ ದಾರಿ ಬಂದ್ ಆಗಿದೆ. ಮಳೆಯಿಂದ ತತ್ತರಿಸಿರುವ ಕೇರಳಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ನೆರವು ನೀಡಲಿದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ. ಕೇರಳದ ಕೆಲ ಸಂಸದರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕೇರಳ ಸರ್ಕಾರ ರಕ್ಷಣಾ ಕಾರ್ಯ ಮುಂದುವರೆಸಿದೆ. ಅಣೆಕಟ್ಟು ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ. ಕೇರಳ ಇತಿಹಾಸದಲ್ಲಿ ಇದೇ ಮೊದಲ ಬಾರಿ 22 ಅಣೆಕಟ್ಟುಗಳು ತುಂಬಿದ್ದು, ಎಲ್ಲ ಅಣೆಕಟ್ಟುಗಳ ಗೇಟ್ ತೆರೆಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...