alex Certify
ಕನ್ನಡ ದುನಿಯಾ       Mobile App
       

Kannada Duniya

ಆಡಿನೊಂದಿಗೂ ಲೈಂಗಿಕ ಕ್ರಿಯೆ ನಡೆಸಿದ್ದ ಅತ್ಯಾಚಾರಿ

kerala rape

ತ್ರಿಶೂರ್: ದೇಶಾದ್ಯಂತ ಸಂಚಲನ ಮೂಡಿಸಿದ್ದ, ಕೇರಳದ ಕಾನೂನು ಕಾಲೇಜ್ ವಿದ್ಯಾರ್ಥಿನಿ ಜಿಶಾ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ವಿಕೃತಕಾಮಿಯಾಗಿದ್ದು, ಆಡಿನೊಂದಿಗೂ ಲೈಂಗಿಕ ಕ್ರಿಯೆ ನಡೆಸಿದ್ದ ಸಂಗತಿ ಬೆಳಕಿಗೆ ಬಂದಿದೆ.

 

ವಿದ್ಯಾರ್ಥಿನಿ ಜಿಶಾ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಮುಖ ಆರೋಪಿ ಅಮೀರುಲ್ ಇಸ್ಲಾಂನನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದವನಾದ ಅಮೀರುಲ್ ಕೇರಳಕ್ಕೆ ವಲಸೆ ಬಂದಿದ್ದು, ಕಳೆದ ತಿಂಗಳು ಕಾನೂನು ವಿದ್ಯಾರ್ಥಿನಿ ಜಿಶಾ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ. ಈ ವಿಕೃತಕಾಮಿ ಅಮಾನುಷವಾಗಿ ಅತ್ಯಾಚಾರ ಎಸಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

 

ಆರೋಪಿ ಬಂಧನಕ್ಕೂ ಮೊದಲು ತಾನು ವಾಸವಾಗಿದ್ದ ಪೆರಂಬವೂರು ಎಂಬಲ್ಲಿ ಆಡಿನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಆಡಿನ ಗುಪ್ತಾಂಗದ ಭಾಗದಲ್ಲಿ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಪಶು ವೈದ್ಯರು ಪರೀಕ್ಷೆ ನಡೆಸಿದ್ದಾರೆ. ಇದೇ ರೀತಿ ಜಿಶಾ ಮೇಲೆ ಆರೋಪಿ ಅಮಾನುಷವಾಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...