alex Certify
ಕನ್ನಡ ದುನಿಯಾ       Mobile App
       

Kannada Duniya

ಅಶ್ಲೀಲ ಫೋಟೋ ಅಪ್ ಲೋಡ್ ಮಾಡಿದ ಗಾಯಕನ ವಿರುದ್ಧ ಕೇಸ್

Kerala singer probed for posting nude pics of sister-in-lawಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕರೊಬ್ಬರು ತನ್ನ ಪತ್ನಿಯ ಸಹೋದರಿಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇರಳದ ಗಾಯಕ ನವೀನ್ ವಿರುದ್ಧ ಅವರ ನಾದಿನಿ, ಕೊಚ್ಚಿಯ ಪಿರಾವೋಂ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದು, ತಮ್ಮ ಚಿತ್ರವನ್ನು ಎಡಿಟ್ ಮಾಡಿ, ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ಅದರಲ್ಲಿ ಅಪ್ ಲೋಡ್ ಮಾಡಿದ್ದಾರೆಂದು ತಿಳಿಸಿದ್ದಾರೆ.

ಆದರೆ ಈ ಆರೋಪವನ್ನು ನಿರಾಕರಿಸಿರುವ ನವೀನ್, ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವ ನಾದಿನಿಗೆ ಲೀಗಲ್ ನೋಟೀಸ್ ನೀಡುವುದಾಗಿ ತಿಳಿಸಿದ್ದಾರೆ. ಕಳೆದ ವರ್ಷದ ಜುಲೈನಲ್ಲಿ ವಿವಾಹವಾಗಿದ್ದ ನವೀನ್ ವಿರುದ್ಧ ಈ ಹಿಂದೆ ಅವರ ಪತ್ನಿಯೂ ಸಹ ಫೇಸ್ ಬುಕ್ ನಲ್ಲಿ ಅಶ್ಲೀಲ ಮೆಸೇಜ್ ಹಾಕಿರುವ ಸಂಬಂಧ ಪ್ರಕರಣ ದಾಖಲಿಸಿದ್ದು, ಸದ್ಯ ಇಬ್ಬರೂ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...