alex Certify
ಕನ್ನಡ ದುನಿಯಾ       Mobile App
       

Kannada Duniya

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ಸಾವು

ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲ್ಲೂಕಿನ ಗೋಳೂರು ಬಳಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಕೇರಳದ ಗಡಿಭಾಗದಲ್ಲಿ ಘಟನೆ ನಡೆದಿದೆ. ಮೃತರು ಕೇರಳದ ಕಬಿನಿಗಿರಿ ನಿವಾಸಿಗಳಾಗಿದ್ದಾರೆ. ತಂದೆ ಚಾಲಕಲ್ ಬೇಬಿ(53), ಅವರ ಪುತ್ರ ಅಜಿತ್(24), ಪುತ್ರಿ ಅನಿತಾ(18) ಮೃತಪಟ್ಟವರೆಂದು ಗುರುತಿಸಲಾಗಿದೆ.

ಸ್ನಾನಕ್ಕೆಂದು ನೀರಿಗೆ ಇಳಿದ ಅನಿತಾ ನೀರಿನಲ್ಲಿ ಮುಳುಗಿದ್ದು, ಅವರನ್ನು ರಕ್ಷಿಸಲು ಹೋದ ತಂದೆ, ಮಗ ಕೂಡ ನೀರು ಪಾಲಾಗಿದ್ದಾರೆ.

ಕೇರಳದ ಪುಲ್ಪಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ನೀರು ಪಾಲಾದ ಮೂವರಿಗಾಗಿ ಹುಡುಕಾಟ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...