alex Certify
ಕನ್ನಡ ದುನಿಯಾ       Mobile App
       

Kannada Duniya

1000 ವರ್ಷಗಳ ಸಂಪ್ರದಾಯ ಮುರಿದ ಮಸೀದಿ

muslim-women

ಕೊಟ್ಟಾಯಂ: ದೇವಾಲಯಗಳಿಗೆ ಹೆಣ್ಣುಮಕ್ಕಳಿಗೂ ಪ್ರವೇಶ ನೀಡಬೇಕೆಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿದ್ದು, ಹಲವು ಹೋರಾಟಗಳು ಕೂಡ ನಡೆದ ಬಗ್ಗೆ ವರದಿಯಾಗಿವೆ. ಮಹಾರಾಷ್ಟ್ರದ ಶನಿಸಿಂಗಣಾಪುರ, ಶಬರಿಮಲೆ ಮೊದಲಾದ ದೇವಾಲಯಗಳಿಗೆ ಮಹಿಳೆಯರ ಪ್ರವೇಶ ಕುರಿತು ಚರ್ಚೆ ನಡೆದಿವೆ.

ಈಗಾಗಲೇ ಹಲವು ದೇವಾಲಯಗಳಲ್ಲಿ ಮಹಿಳೆಯರಿಗೆ ಪ್ರವೇಶ ನೀಡಲಾಗಿದ್ದು, ಹಿಂದಿನ ಸಂಪ್ರದಾಯಕ್ಕೆ ಬ್ರೇಕ್ ಹಾಕಲಾಗಿದೆ. ಅದೇ ರೀತಿಯ ಪ್ರಕರಣವೊಂದು ಕೇರಳದಲ್ಲಿ ನಡೆದಿದೆ. ಕೇರಳದ ಕೊಟ್ಟಾಯಂ ಸಮೀಪದ ಪಾರಂಪರಿಕ ತಾಣ ತಜಾತಂಗಡಿ ಜುಮ್ಮಾ ಮಸೀದಿಯಲ್ಲಿ 1000 ವರ್ಷಗಳ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟಿದ್ದು, ಹೆಣ್ಣುಮಕ್ಕಳಿಗೂ ಪ್ರವೇಶ ನೀಡಲಾಗಿದೆ. ಈ ಮಸೀದಿಯಲ್ಲಿ ಹೆಣ್ಣು ಮಕ್ಕಳಿಗೆ ಪ್ರವೇಶ ನೀಡಬೇಕೆಂದು ಹಲವಾರು ಹೋರಾಟ ನಡೆದಿದ್ದವು.

ಈ ಹಿನ್ನೆಲೆಯಲ್ಲಿ ಮಸೀದಿ ಆಡಳಿತ ಮಂಡಳಿಯಿಂದ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇನ್ನು ಮುಂದೆ ಮಹಿಳೆಯರೂ, ಪ್ರವೇಶಿಸಲು ಅವಕಾಶ ನೀಡಲಾಗಿದೆ. ಈ ಮಸೀದಿಯಲ್ಲಿ 1000 ವರ್ಷಗಳಿಂದ ಮಹಿಳೆಯರಿಗೆ ಪ್ರವೇಶ ನೀಡಿರಲಿಲ್ಲ. ಇದೀಗ ಹೊಸ ಬೆಳವಣಿಗೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...