alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಅಶ್ಲೀಲ ನೃತ್ಯ

INTTUCಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕ ಸೋಮವಾರದಂದು ಕೋಲ್ಕತ್ತಾದಲ್ಲಿ ಏರ್ಪಡಿಸಿದ್ದ ಸ್ವಾತಂತ್ರೋತ್ಸವ ಸಮಾರಂಭದ ವೇಳೆ ಅಶ್ಲೀಲ ನೃತ್ಯ ಪ್ರದರ್ಶನ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ.

ತೃಣಮೂಲ ಕಾಂಗ್ರೆಸ್ ನ ಕಾರ್ಮಿಕ ಘಟಕ, ಇಂಡಿಯನ್ ನ್ಯಾಷನಲ್ ತೃಣಮೂಲ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTTUC) 70 ನೇ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಆಯೋಜಿಸಿದ್ದು, ಈ ವೇಳೆ ಯುವತಿಯೊಬ್ಬಳು ಅಶ್ಲೀಲ ಗೀತೆಗಳಿಗೆ ಹೆಜ್ಜೆ ಹಾಕಿದ್ದಾಳೆ. ಅಷ್ಟೇ ಅಲ್ಲ ಈ ಸಮಾರಂಭದಲ್ಲಿ ಹಾಜರಿದ್ದವರು ಆಕೆಯ ಮೇಲೆ ನೋಟುಗಳನ್ನು ತೂರಿದ್ದಾರೆ.

ಈ ಸಮಾರಂಭದ ದೃಶ್ಯಾವಳಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ವಿಪಕ್ಷಗಳಾದ ಕಾಂಗ್ರೆಸ್ ಹಾಗೂ ಎಡಪಕ್ಷಗಳು ತೀವ್ರವಾಗಿ ಟೀಕಿಸಿವೆ. ಜೊತೆಗೆ ಟಿಎಂಸಿ ಸಚಿವ ಶೋಭನ್ ದೇವ್ ಚಟ್ಟೋಪಾಧ್ಯಾಯ ಇದನ್ನು ಖಂಡಿಸಿದ್ದು, ಘಟನೆ ಕುರಿತು INTTUC ನಾಯಕರಿಂದ ವಿವರಣೆ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ INTTUC ನಾಯಕ ಜಗನ್ನಾಥ್ ರಾಯ್, ಇದೊಂದು ಸಾಂಸ್ಕೃತಿಕ ಕಾರ್ಯಕ್ರಮವೆಂದು ಸಮರ್ಥಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...