alex Certify
ಕನ್ನಡ ದುನಿಯಾ       Mobile App
       

Kannada Duniya

ಹುಡುಗಿಯರ ಮೇಲೆ ಸೆಕ್ಯೂರಿಟಿ ಗಾರ್ಡ್, ಸ್ನೇಹಿತನಿಂದ ಹೀನ ಕೃತ್ಯ

ಕೋಲ್ಕತ್ತಾ: ಕೋಲ್ಕತ್ತಾದ ಗೋಬಿಂದಾಪುರದಲ್ಲಿ ಇಬ್ಬರು ಚಿಕ್ಕ ಹುಡುಗಿಯರ ಮೇಲೆ, 2 ತಿಂಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾಲಕಿಯರ ಮೇಲೆ ಸೆಕ್ಯೂರಿಟಿ ಗಾರ್ಡ್ ಮತ್ತು  ಆತನ ಸ್ನೇಹಿತ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯರು ನೀಡಿದ ಮಾಹಿತಿ ಆಧರಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ದೇಶದಲ್ಲಿ ಇತ್ತೀಚೆಗೆ ಅಪ್ರಾಪ್ತ ವಯಸ್ಸಿನವರ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗಿವೆ. ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ನಿರಂತರವಾಗಿ ದೌರ್ಜನ್ಯವೆಸಗಿ ಕೊಲೆ ಮಾಡಲಾಗಿತ್ತು. ಇದಾದ ನಂತರ ಹಲವು ಪ್ರಕರಣ ಮರುಕಳಿಸಿ, ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಸುಗ್ರೀವಾಜ್ಞೆಗೆ ಕಳೆದ ತಿಂಗಳು ಅಂಕಿತ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...