alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್ ಬೆಲೆ ಏರಿಕೆ ಕುರಿತು ರಾಹುಲ್ ಗೆ ಬಿಜೆಪಿ ಟಾಂಗ್

ರಾಜ್ಯ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದೆ. ಈ ಬಜೆಟ್ ನಲ್ಲಿ ಕುಮಾರಸ್ವಾಮಿ ಸರ್ಕಾರ ಜನಸಾಮಾನ್ಯರಿಗೆ ಹೊರೆ ಹೇರಿದೆ. ಪೆಟ್ರೊಲ್ ಹಾಗೂ ಡಿಸೇಲ್ ಬೆಲೆ ಏರಿಸಿ ಜನರಿಗೆ ಶಾಕ್ ನೀಡಿದೆ.

ತೈಲ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಟಾಂಗ್ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರು ವಿರಾಟ್ ಕೊಹ್ಲಿ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿದ್ದ ವೇಳೆ ಇದಕ್ಕೆ ಪ್ರತಿಯಾಗಿ ರಾಹುಲ್ ಗಾಂಧಿ ಪ್ಯೂಯೆಲ್ ಚಾಲೆಂಜ್ ಹಾಕಿದ್ದರು.

ಮೋದಿಯವರೇ ನೀವು ಕೊಹ್ಲಿ ಸವಾಲು ಸ್ವೀಕರಿಸಿದ್ದು ಸಂತಸ. ಈಗ ನನ್ನ ಸವಾಲು ಎಸೆಯುತ್ತೇನೆ. ತೈಲ ಬೆಲೆಯಲ್ಲಿ ಇಳಿಮುಖವಾಗದೆ ಇದ್ದರೆ ದೇಶವ್ಯಾಪಿ ಪ್ರತಿಭಟನೆ ಮಾಡೋದಾಗಿ ತಿಳಿಸಿದ್ದರು.

ರಾಹುಲ್ ಗಾಂಧಿಯವರ ಈ ಪ್ಯೂಯೆಲ್ ಚಾಲೆಂಜ್ ಗೆ ಈಗ ಅಣಕವಾಡಿರುವ ಬಿಜೆಪಿ, ನಿಮ್ಮ ಸರ್ಕಾರ (ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ) ಅಧಿಕಾರದಲ್ಲಿರುವ ರಾಜ್ಯದಲ್ಲೇ ಇದನ್ನು ಯಾರೂ ಸ್ವೀಕರಿಸುತ್ತಿಲ್ಲವೆಂದು ಟ್ವೀಟ್ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...