alex Certify
ಕನ್ನಡ ದುನಿಯಾ       Mobile App
       

Kannada Duniya

ಗಿನ್ನಿಸ್ ದಾಖಲೆಗೆ ಪಾತ್ರವಾಯ್ತು ಕೂಚುಪುಡಿ ನೃತ್ಯ

kuchipu-andra

ವಿಜಯವಾಡ: ಆಂಧ್ರಪ್ರದೇಶದಲ್ಲಿ ಕೂಚುಪುಡಿ ಕಲಾವಿದರು, ಗಿನ್ನಿಸ್ ದಾಖಲೆಯ ನೃತ್ಯವನ್ನು ಪ್ರದರ್ಶಿಸಿದ್ದಾರೆ.

ಬರೋಬ್ಬರಿ 6117 ಕಲಾವಿದರು ವಿಜಯವಾಡದಲ್ಲಿ ಕ್ಲಾಸಿಕಲ್ ಕೂಚುಪುಡಿ ನೃತ್ಯ ಪ್ರದರ್ಶಿಸಿದ್ದಾರೆ. ‘ಜಯಮು ಜಯಮು’ ಹಾಡಿಗೆ ನೃತ್ಯ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ವೆಂಕಯ್ಯ ನಾಯ್ಡು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೊದಲಾದರು ಇದ್ದರು.

ಆಂಧ್ರ ಭಾಷಾ ಮತ್ತು ಸಂಸ್ಕೃತಿ ಸಚಿವಾಲಯ ಐ.ಜಿ.ಎಂ.ಸಿ. ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಮಹಾ ಬೃಂದ ನಾಟ್ಯಮ್ ವತಿಯಿಂದ ಈ ಗಿನ್ನಿಸ್ ದಾಖಲೆಯ ನೃತ್ಯ ಪ್ರದರ್ಶಿಸಲಾಯಿತು.

2012 ರಲ್ಲಿ ಹೈದರಾಬಾದ್ ನಲ್ಲಿ 5900 ಕಲಾವಿದರು ಕೂಚುಪುಡಿ ನೃತ್ಯ ಪ್ರದರ್ಶಿಸಿದ್ದು, ಇದುವರೆಗಿನ ದಾಖಲೆಯಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...