alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಲ ಮನ್ನಾ ಮಾಡಲು ಕೇಂದ್ರದ ನೆರವು ಕೋರಿದ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನವದೆಹಲಿಯಲ್ಲಿಂದು ನೀತಿ ಆಯೋಗದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರದ ಮುಂದೆ ಹಲವು ಬೇಡಿಕೆಗಳನ್ನಿಟ್ಟಿದ್ದಾರೆ.

ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿಯವರು, ರೈತರ ಸಾಲ ಮನ್ನಾ ಮಾಡಲು ತಮ್ಮ ಸರ್ಕಾರ ಪಣ ತೊಟ್ಟಿದೆ. ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ಶೇಕಡಾ 50 ರಷ್ಟು ಅನುದಾನ ನೀಡಬೇಕೆಂದು ಮನವಿ ಮಾಡಿದ್ದಾರೆ.

ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿ ಕರ್ನಾಟಕದ 85 ಲಕ್ಷ ರೈತರು ಸಾಲ ಪಡೆದುಕೊಂಡಿದ್ದು, ಹೀಗಾಗಿ ಸಾಲ ಮನ್ನಾ ಯೋಜನೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯ ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...