alex Certify
ಕನ್ನಡ ದುನಿಯಾ       Mobile App
       

Kannada Duniya

ಸೋನಿಯಾ, ರಾಹುಲ್ ಜೊತೆ ಹೆಚ್.ಡಿ.ಕೆ. ಭೇಟಿ

ಇಂದು ದೆಹಲಿಗೆ ಭೇಟಿ ನೀಡಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಭೇಟಿ ಸಂದರ್ಭದಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಚಿಸುವ ಕುರಿತು ಸಮಾಲೋಚನೆ ನಡೆಸಿದ್ದಾರೆ.

ಅಲ್ಲದೇ ಬುಧವಾರದಂದು ವಿಧಾನಸೌಧದ ಎದುರು ಪ್ರಮಾಣವಚನ ಸ್ವೀಕರಿಸಲಿರುವ ಹೆಚ್. ಡಿ. ಕುಮಾರಸ್ವಾಮಿಯವರು ಈ ಸಮಾರಂಭಕ್ಕೆ ಆಗಮಿಸುವಂತೆ ಕಾಂಗ್ರೆಸ್ ವರಿಷ್ಠರನ್ನು ಆಹ್ವಾನಿಸಿದ್ದಾರೆ.

ತಮ್ಮ ಮಂತ್ರಿಮಂಡಲದಲ್ಲಿ ಕಾಂಗ್ರೆಸ್ ವತಿಯಿಂದ ಯಾರು ಸಚಿವರಾಗಬೇಕು ಎಂಬುದನ್ನು ಹೆಚ್.ಡಿ. ಕುಮಾರಸ್ವಾಮಿಯವರು ಕಾಂಗ್ರೆಸ್ ವರಿಷ್ಟರೊಂದಿಗಿನ ಭೇಟಿ ಸಂದರ್ಭದಲ್ಲಿ ಚರ್ಚಿಸಿದ್ದಾರೆ ಎನ್ನಲಾಗಿದ್ದು, ಕುಮಾರಸ್ವಾಮಿಯವರ ಪ್ರಮಾಣವಚನದ ಬಳಿಕ, ಸಚಿವ ಸಂಪುಟವನ್ನು ಯಾರು ಸೇರಲಿದ್ದಾರೆಂಬ ಕುತೂಹಲಕ್ಕೆ ತೆರೆ ಬೀಳಲಿದೆ.

ಕಾಂಗ್ರೆಸ್ ವರಿಷ್ಠರು ನೀಡಿರುವ ಕೆಲ ಸಲಹೆಗಳನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಮಾಣವಚನ ಸ್ವೀಕಾರದ ಬಳಿಕ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸಲಿದ್ದು, ಆನಂತರ ಮೈತ್ರಿ ಸೂತ್ರದನ್ವಯ ಸಂಪುಟ ವಿಸ್ತರಣೆಗೊಳ್ಳಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...