alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಸಭೆಯಲ್ಲೂ ಕುಮಾರಸ್ವಾಮಿಯವರ ಕಣ್ಣೀರಿನ ವಿಷಯ ಪ್ರಸ್ತಾಪ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಅಗ್ನಿಪರೀಕ್ಷೆಗೆ ಗುರಿಯಾಗಿದೆ. ಟಿಡಿಪಿ ಮಂಡಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ನಡೆಯುತ್ತಿದ್ದು, ಈ ವೇಳೆ ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೆಸರುಗಳು ಲೋಕಸಭೆಯಲ್ಲಿ ಪ್ರಸ್ತಾಪವಾಗಿರುವುದು ಗಮನಾರ್ಹ.

ಅವಿಶ್ವಾಸ ನಿರ್ಣಯ ಮಂಡಿಸಿರುವ ಟಿಡಿಪಿ ಸಂಸದರೊಬ್ಬರು ಮಾತನಾಡುವ ವೇಳೆ, ಆಂಧ್ರ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿ ಲೂಟಿ ಮಾಡಿರುವ ಜನಾರ್ದನ ರೆಡ್ಡಿಯವರನ್ನು ಪಕ್ಕದಲ್ಲಿರಿಸಿಕೊಂಡು ಬಿಜೆಪಿ, ಪ್ರಾಮಾಣಿಕತೆಯ ಮಾತುಗಳನ್ನಾಡುತ್ತಿದೆ ಎಂದು ಲೇವಡಿ ಮಾಡಿದರು.

ಇದಕ್ಕೆ ಪ್ರತಿಯಾಗಿ ಬಿಜೆಪಿ ಸಂಸದ ರಾಕೇಶ್ ಸಿಂಗ್, ಕಾಂಗ್ರೆಸ್ ಬೆಂಬಲದಿಂದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಜೆಡಿಎಸ್ ನ ಕುಮಾರಸ್ವಾಮಿ ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದ್ದನ್ನು ಪ್ರಸ್ತಾಪಿಸಿ, ಇದನ್ನು ಇಡೀ ದೇಶವೇ ನೋಡಿದೆ. ಕುಮಾರಸ್ವಾಮಿಯವರು ನಾನು ವಿಷಕಂಠನಂತೆ ಎಂದು ಹೇಳಿದ್ದಾರೆ. ಅವರಿಗೆ ಈ ರೀತಿ ಮಾಡಿದವರು ಯಾರು ಎಂಬುದನ್ನು ನಾನು ಹೇಳಲು ಹೋಗುವುದಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷವನ್ನು ಗೇಲಿ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...