alex Certify
ಕನ್ನಡ ದುನಿಯಾ       Mobile App
       

Kannada Duniya

ಲೇಡಿಸ್ ಹಾಸ್ಟೆಲ್ ಬಾತ್ ರೂಂ ನಲ್ಲಿ ಕ್ಯಾಮರಾ ಇಟ್ಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ

ಬೆಂಗಳೂರು: ಲೇಡಿಸ್ ಹಾಸ್ಟೆಲ್ ನ ಬಾತ್ ರೂಂ ನಲ್ಲಿ ಕ್ಯಾಮರಾ ಇಟ್ಟು, ವಿಡಿಯೋ ಮಾಡಿ, ವಿದ್ಯಾರ್ಥಿನಿಯರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಾಮುಕ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವನನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಸಿದ್ಧಾರ್ಥ್ ಬಂಧಿತ ಆರೋಪಿ. ತಾನು ವ್ಯಾಸಂಗ ಮಾಡುತ್ತಿದ್ದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಸ್ನಾನದ ಗೃಹದಲ್ಲಿ ಕ್ಯಾಮರಾ ಫಿಕ್ಸ್ ಮಾಡಿದ್ದ ಆರೋಪಿ, ಸ್ನಾನದ ವಿಡಿಯೋಗಳನ್ನು ರೆಕಾರ್ಡ್ ಮಾಡುತ್ತಿದ್ದ. ಅಲ್ಲದೇ ವಿದ್ಯಾರ್ಥಿನಿಯರಿಗೆ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸುತ್ತಿದ್ದ. ಒಪ್ಪದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಅಪ್​ಲೋಡ್ ಮಾಡೋದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ.

ಅಂತಿಮವಾಗಿ ಸಿದ್ದಾರ್ಥ್ ನನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದು, ಈತನ ಹಿಂದೆ ಒಂದು ಗ್ಯಾಂಗೇ ಕಾರ್ಯ ನಿರ್ವಹಿಸುತ್ತಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ವಿಚಾರಣೆ ಚುರುಕುಗೊಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...