alex Certify
ಕನ್ನಡ ದುನಿಯಾ       Mobile App
       

Kannada Duniya

ಜಾಮೀನು ಪಡೆದು ಹೊರ ಬಂದ ಲಾಲೂಗೆ ಬಾಬಾ ರಾಮ್ ದೇವ್ ಕೊಟ್ಟ ಸಲಹೆ ಏನು?

ಬಹುಕೋಟಿ ಮೇವು ಹಗರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ 6 ವಾರಗಳ ವೈದ್ಯಕೀಯ ಜಾಮೀನು ಪಡೆದು ಇಂದು ಜೈಲಿನಿಂದ ಹೊರ ಬಂದಿದ್ದಾರೆ.

ಪಾಟ್ನಾದಲ್ಲಿರುವ ಲಾಲೂ ಪ್ರಸಾದ್ ಯಾದವ್ ನಿವಾಸಕ್ಕೆ ಯೋಗ ಗುರು ಬಾಬಾ ರಾಮ್ ದೇವ್ ಇಂದು ಭೇಟಿ ನೀಡಿದ್ರು. ಈ ವೇಳೆ ಜಾಮೀನು ಸಿಕ್ಕಿದ್ದಕ್ಕೆ ಲಾಲೂ ಅವರಿಗೆ ಅಭಿನಂದನೆ ಸಲ್ಲಿಸಿದ್ರು.

ಲಾಲೂ ಪ್ರಸಾದ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ ಬಾಬಾ ರಾಮ್ ದೇವ್, ಯೋಗ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ ಅಂತಾ ಸಲಹೆ ನೀಡಿದ್ದಾರೆ.

ಬಹುಕೋಟಿ ಮೇವು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್, ರಾಂಚಿಯ ಬಿರ್ಸಾ ಮುಂಡಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದು, ಇದೀಗ ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ಪಡೆದುಕೊಂಡಿದ್ದಾರೆ. ಅಲ್ಲದೇ ಅವರ ಪುತ್ರನ ವಿವಾಹವೂ ನಡೆಯುತ್ತಿದ್ದು, ಇದಾದ ಬಳಿಕ ಚಿಕಿತ್ಸೆಗಾಗಿ ಲಾಲೂ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...