alex Certify
ಕನ್ನಡ ದುನಿಯಾ       Mobile App
       

Kannada Duniya

ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು

ಆರ್ ಜೆ ಡಿ ಮುಖ್ಯಸ್ಥ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು ಮತ್ತೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇಂದು ಬೆಳಗ್ಗೆ ತೀವ್ರ ಉಸಿರಾಟ ತೊಂದರೆ ಮತ್ತು ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಪಾಟ್ನಾದ ಇಂದಿರಾ ಗಾಂಧಿ ವೈದ್ಯಕೀಯ ಸಂಸ್ಥೆಗೆ ದಾಖಲಿಸಲಾಗಿದೆ.

ಲಾಲೂ ಅವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹಾಗೆಯೇ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗ್ತಿದೆ.

3 ದಿನಗಳ ಪೆರೋಲ್ ಮೇಲೆ ಕಳೆದ ವಾರ ಲಾಲೂ ತಮ್ಮ ಪುತ್ರ ತೇಜ್ ಪ್ರತಾಪ್ ಯಾದವ್ ಮದುವೆಗೆ ಆಗಮಿಸಿದ್ರು. ಅದರ ಜೊತೆಗೆ ವೈದ್ಯಕೀಯ ಕಾರಣಗಳಿಂದಾಗಿ 6 ವಾರಗಳ ತಾತ್ಕಾಲಿಕ ಜಾಮೀನು ಮಂಜೂರಾಗಿತ್ತು. ಇವರು ಜೈಲಿನಿಂದ ಮನೆಗೆ ಬಂದಾಗ, ಯೋಗ ಗುರು ಬಾಬಾ ರಾಮ್ ದೇವ್ ಭೇಟಿಯಾಗಿ, ಆರೋಗ್ಯ ಸುಧಾರಣೆಗೆ ಯೋಗ ಮಾಡುವಂತೆ ತಿಳಿಸಿದ್ರು.

ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ 14 ವರ್ಷ ಶಿಕ್ಷೆಗೊಳಗಾಗಿರುವ ಲಾಲೂ ಪ್ರಸಾದ್ ಯಾದವ್, ಕಳೆದ ಡಿಸೆಂಬರ್ 23, 2017ರಿಂದ ಜೈಲಿನಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...