alex Certify
ಕನ್ನಡ ದುನಿಯಾ       Mobile App
       

Kannada Duniya

ಕೋರ್ಟ್ ಮುಂದೆ ಶರಣಾದ ಲಾಲು ಪ್ರಸಾದ್ ಯಾದವ್

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್ ಜೆ ಡಿ ಮುಖಂಡ ಲಾಲು ಪ್ರಸಾದ್ ಯಾದವ್ ಸ್ವಾತಂತ್ರ್ಯದ ದಿನ ಮುಗಿದಿದೆ. ಜಾಮೀನಿನ ಮೇಲೆ 3 ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದ ಲಾಲು ಗುರುವಾರ ಕೋರ್ಟ್ ಗೆ ಶರಣಾಗಿದ್ದಾರೆ.

ಗುರುವಾರ ರಾಂಚಿಯ ಸಿಬಿಐ ಕೋರ್ಟ್ ಗೆ ಲಾಲು ಪ್ರಸಾದ್ ಯಾದವ್ ಶರಣಾಗಿದ್ದಾರೆ. ವಿಚಾರಣೆ ನಂತ್ರ ಬಿರ್ಸಾ ಮುಂಡಾ ಜೈಲಿಗೆ ಕಳುಹಿಸುವಂತೆ ಸಿಬಿಐ ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ಕಾನೂನು ಕ್ರಮ ಮುಗಿದ ನಂತ್ರ ಲಾಲು ಪ್ರಸಾದ್ ಯಾದವ್ ಅವ್ರನ್ನು ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆಯಿದೆ.

ಅನಾರೋಗ್ಯದಿಂದ ಬಳಲುತ್ತಿರುವ ಲಾಲು ಪ್ರಸಾದ್ ಯಾದವ್ ಮುಂಬೈ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಜಾರ್ಖಂಡ್ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಯಾದವ್ ಅರ್ಜಿ ವಜಾ ಮಾಡಿದ್ದ ಕೋರ್ಟ್ ಆಗಸ್ಟ್ 30 ರಂದು ಕೋರ್ಟ್ ಮುಂದೆ ಹಾಜರಾಗುವಂತೆ ಸೂಚನೆ ನೀಡಿತ್ತು. ಕೋರ್ಟ್ ಆದೇಶದ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಲಾಲು ಪ್ರಸಾದ್ ಯಾದವ್ ಕೋರ್ಟ್ ಗೆ ಶರಣಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...