alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆಯಿಂದ ಲಾಲು ಪ್ರಸಾದ್ ಡಿಸ್ಚಾರ್ಜ್

ಆರ್ಜೆಡಿ ಅಧ್ಯಕ್ಷ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮುಂಬೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಲಾಲು ಪ್ರಸಾದ್ ಯಾದವ್ ಕಳೆದ ಮೂರು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಸೇರಿರುವ ಲಾಲು ಪ್ರಸಾದ್ ಗೆ ಆರೋಗ್ಯ ಸಮಸ್ಯೆ ಕಾಡಿದ್ದರಿಂದ ಆಸ್ಪತ್ರೆ ಸೇರಬೇಕಾಯ್ತು. ಮುಂಬೈನ ಏಷ್ಯನ್ ಇನ್ಸ್ಸಿಟ್ಯೂಟ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾಲು ಪ್ರಸಾದ್ ಯಾದವ್, ಜಾಮೀನು ಅವಧಿ ವಿಸ್ತರಿಸುವಂತೆ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಲಾಲು ಬೇಡಿಕೆಯನ್ನು ತಿರಸ್ಕರಿಸಿದೆ. ಲಾಲು ಅರ್ಜಿ ವಜಾ ಮಾಡಿದ ಕೋರ್ಟ್, ಆಗಸ್ಟ್ 30 ರೊಳಗೆ ಶರಣಾಗುವಂತೆ ಸೂಚಿಸಿದೆ. ಇದಕ್ಕೂ ಮುನ್ನ ಕೋರ್ಟ್ ಆಗಸ್ಟ್ 10 ರ ಅವಧಿಯನ್ನು ಆಗಸ್ಟ್ 20 ರವರೆಗೆ ವಿಸ್ತರಣೆ ಮಾಡಿತ್ತು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಲಾಲು ಜೈಲು ಸೇರುವುದು ಅನಿವಾರ್ಯವಾಗಿದೆ. ಮುಂಬೈ ಆಸ್ಪತ್ರೆಯಿಂದ ಶನಿವಾರ ಬೆಳಿಗ್ಗೆ ಬಿಡುಗಡೆಯಾಗಿರುವ ಲಾಲುಗೆ ಜೈಲಿನಲ್ಲಿಯೇ ಚಿಕಿತ್ಸೆ ಮುಂದುವರೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...