alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಾಹ ಸಮಾರಂಭದಲ್ಲಿ ಲಾಲೂ ಪುತ್ರರ ಭರ್ಜರಿ ಡಾನ್ಸ್

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಶನಿವಾರದಂದು ಮಾಜಿ ಸಚಿವರಾದ ಚಂದ್ರಿಕಾ ರಾಯ್ ಅವರ ಪುತ್ರಿ ಐಶ್ವರ್ಯಾ ರಾಯ್ ಜೊತೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ.

ಪಾಟ್ನಾದ ವೆಟರ್ನರಿ ಕಾಲೇಜು ಮೈದಾನದಲ್ಲಿ ನಡೆದ ಈ ಅದ್ದೂರಿ ವಿವಾಹ ಸಮಾರಂಭಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿದ್ದರು. ಬಹು ಕೋಟಿ ಮೇವು ಹಗರಣದಲ್ಲಿ ಜೈಲು ಶಿಕ್ಷೆಗೊಳಗಾಗಿರುವ ಲಾಲೂ ಪ್ರಸಾದ್ ಯಾದವ್, ಅನಾರೋಗ್ಯದ ಹಿನ್ನಲೆಯಲ್ಲಿ ತಾತ್ಕಾಲಿಕ ಜಾಮೀನು ಪಡೆದುಕೊಂಡಿದ್ದು, ಪುತ್ರನ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ಲಾಲೂ ದಂಪತಿ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದ್ದಾರೆ.

ಈ ಮಧ್ಯೆ ಲಾಲೂ ಪ್ರಸಾದ್ ನಿವಾಸದ ಮುಂದೆ ಹಾಕಲಾಗಿರುವ ಪೋಸ್ಟರ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ಇದರಲ್ಲಿ ಲಾಲೂ ಪುತ್ರ ತೇಜ್ ಪ್ರತಾಪ್ ಯಾದವ್ ಶಿವನಂತೆ ಕಾಣಿಸಿಕೊಂಡಿದ್ದರೆ ವಧು ಐಶ್ವರ್ಯಾ ರಾಯ್ ರನ್ನು ಪಾರ್ವತಿಯಂತೆ ಚಿತ್ರಿಸಲಾಗಿದೆ.

ಲಾಲೂ ಪ್ರಸಾದ್ ರ ಮತ್ತೊಬ್ಬ ಪುತ್ರ ತೇಜಸ್ವಿ ಯಾದವ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋ ಒಂದು ಈಗ ವೈರಲ್ ಆಗಿದೆ. ಇದರಲ್ಲಿ ತೇಜಸ್ವಿ ಯಾದವ್ ಈಗ ವೈವಾಹಿಕ ಬದುಕಿಗೆ ಕಾಲಿಟ್ಟ ಹಿರಿಯ ಸಹೋದರ ತೇಜ್ ಪ್ರತಾಪ್ ಯಾದವ್ ಜೊತೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋವನ್ನು ಸಾವಿರಾರು ಮಂದಿ ಲೈಕ್ ಮಾಡಿ ಶೇರ್ ಮಾಡಿದ್ದಾರೆ.

Desi boys on the floor..

Posted by Tejashwi Yadav on Saturday, May 12, 2018

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...