alex Certify
ಕನ್ನಡ ದುನಿಯಾ       Mobile App
       

Kannada Duniya

ರಾಮಮಂದಿರ ನಿರ್ಮಾಣದ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’

ಪ್ರಧಾನಿ ನರೇಂದ್ರ ಮೋದಿಯವರ  ನೇತೃತ್ವದ ಕೇಂದ್ರ ಸರ್ಕಾರ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಬಹುದೆಂಬ ನಿರೀಕ್ಷೆಯಲ್ಲಿದ್ದವರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಸುಗ್ರೀವಾಜ್ಞೆಗೆ ಮಿತ್ರಪಕ್ಷದ ಸಚಿವರಿಂದಲೇ ಅಪಸ್ವರ ಕೇಳಿ ಬಂದಿದೆ.

ಸಂದರ್ಶನವೊಂದರಲ್ಲಿ ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ ಮುಖಂಡ ರಾಮ್ ವಿಲಾಸ್ ಪಾಸ್ವಾನ್, ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತರುವ ಸಾಧ್ಯತೆಯೇ ಇಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಇದಕ್ಕೆ ಕಾಯಲೇ ಬೇಕು ಎಂದು ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸವಾಗಿ ನಾಳೆಗೆ ಇಪ್ಪತ್ತಾರು ವರ್ಷಗಳು ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಬಿಜೆಪಿ ಮಿತ್ರ ಪಕ್ಷದ ನಾಯಕರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಕೇಂದ್ರ ಸರ್ಕಾರ ರಾಮಮಂದಿರ ನಿರ್ಮಾಣಕ್ಕಾಗಿ ಒಂದೊಮ್ಮೆ ಸುಗ್ರೀವಾಜ್ಞೆ ಹೊರಡಿಸಲು ಮುಂದಾದರೂ ಇದಕ್ಕೆ ಮಿತ್ರ ಪಕ್ಷದ ನಾಯಕರು ಅಡ್ಡಗಾಲಾಗುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...