alex Certify
ಕನ್ನಡ ದುನಿಯಾ       Mobile App
       

Kannada Duniya

4 ವರ್ಷದ ಬಾಲಕಿಯನ್ನು ಹೊತ್ತೊಯ್ದ ಚಿರತೆ

ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಹಳ್ಳಿಯೊಂದರ ಮನೆಯಲ್ಲಿ ಆಹಾರ ಸೇವನೆ ಮಾಡ್ತಿದ್ದ 4 ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದ ಘಟನೆ ಬೆಳಕಿಗೆ ಬಂದಿದೆ. ಮಂಗಳವಾರ ಈ ಘಟನೆ ನಡೆದಿದ್ದು, ಬಾಲಕಿ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಬಾಲಕಿ ಹುಡುಕಾಟದಲ್ಲಿ ನಿರತರಾಗಿದ್ದಾರೆ.

ಚಂದ್ರಾಪುರದ ಶಿರ್ಶಿ ಗ್ರಾಮದಲ್ಲಿ  ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಮಗುವಿನ ಅಳು ಕೇಳಿ ಹೊರಗೆ ಬಂದ ಮನೆಯವರು ಚಿರತೆ ಹಿಂದೆ ಓಡಿದ್ದಾರೆ. ಆದ್ರೆ ಚಿರತೆ ವೇಗ ಹೆಚ್ಚು ಮಾಡಿದ್ದು, ಅದನ್ನು ಹಿಂಬಾಲಿಸಲು ಕುಟುಂಬಸ್ಥರು ವಿಫಲರಾಗಿದ್ದಾರೆ.

ಮನೆಯಿಂದ ಒಂದು ಕಿಲೋಮೀಟರ್ ದೂರದಲ್ಲಿ ರಕ್ತದ ಕಲೆಯುಳ್ಳ ಮಗುವಿನ ಬಟ್ಟೆ ಸಿಕ್ಕಿದೆ. ಆದ್ರೆ ಮಗುವಿನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಇದು ಗ್ರಾಮಸ್ಥರ ಭಯವನ್ನು ಮತ್ತಷ್ಟು ಹೆಚ್ಚಿಸಿದೆ. ರಾತ್ರಿ ನಿದ್ರೆಯಿಲ್ಲದೆ ಕಾಲ ಕಳೆದಿರುವ ಗ್ರಾಮಸ್ಥರು ಮತ್ತೆ ಯಾರ ಮೇಲೆ ಚಿರತೆ ದಾಳಿ ಮಾಡುತ್ತೋ ಎನ್ನುವ ಭಯದಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...