alex Certify
ಕನ್ನಡ ದುನಿಯಾ       Mobile App
       

Kannada Duniya

ಲಕ್ನೋದ ಜನವಸತಿ ಪ್ರದೇಶಕ್ಕೆ ನುಗ್ಗಿದ ಚಿರತೆ

ಕಾಡು ನಾಶವಾಗುತ್ತಿದ್ದಂತೆ ಪ್ರಾಣಿಗಳು ನಾಡಿಗೆ ಬರುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಕೆಲ ದಿನಗಳ ಹಿಂದಷ್ಟೇ ಕರ್ನಾಟಕದ ತುಮಕೂರಿನಲ್ಲಿ ಚಿರತೆಯೊಂದು ಮನೆಗೆ ನುಗ್ಗಿ ಗಾಬರಿ ಹುಟ್ಟಿಸಿದ್ದು, ನಿರಂತರ ಕಾರ್ಯಾಚರಣೆ ಬಳಿಕ ಅದನ್ನು ಸೆರೆ ಹಿಡಿಯಲಾಗಿತ್ತು.

ಈಗ ಅಂತಹುದೇ ಪ್ರಕರಣವೊಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಅಲ್ಲಿನ ಐಶ್ವರ್ಯ ಕಾಲೋನಿಗೆ ಚಿರತೆಯೊಂದು ನುಗ್ಗಿದ್ದು, ಜನತೆಯಲ್ಲಿ ಆತಂಕವನ್ನು ಹುಟ್ಟು ಹಾಕಿದೆ. ಹಾಡಹಗಲೇ ಜನವಸತಿ ಪ್ರದೇಶದಲ್ಲಿ ಈ ಚಿರತೆ ಕಂಡು ಬಂದಿದ್ದು, ಅದನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಚಿರತೆಯನ್ನು ವೀಕ್ಷಿಸಲು ಭಾರೀ ಸಂಖ್ಯೆಯಲ್ಲಿ ಜನ ಗುಂಪುಗೂಡಿರುವುದು ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಸ್ಥಳದಲ್ಲಿರುವ ಪೊಲೀಸರು ಜನರನ್ನು ಚದುರಿಸುತ್ತಿದ್ದಾರೆ. ಚಿರತೆಯನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...