alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಿಗಳು…!

ಸಲಿಂಗಿಗಳಿಬ್ಬರು ತಮ್ಮ ಪೋಷಕರು ಹಾಗೂ ವಿವಾಹ ಕಾರ್ಯಕ್ರಮ ಆಯೋಜಕರನ್ನು ವಂಚಿಸಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

20 ವರ್ಷದ ಅಸುಪಾಸಿನ ಈ ಯುವತಿಯರಿಬ್ಬರು ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರೆನ್ನಲಾಗಿದ್ದು, ಈ ವಿಚಾರದ ಕುರಿತು ಎರಡೂ ಕುಟುಂಬಗಳಿಗೆ ಯಾವುದೇ ಮಾಹಿತಿಯಿರಲಿಲ್ಲವೆನ್ನಲಾಗಿದೆ.

ಇತ್ತೀಚೆಗೆ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಇವರಿಬ್ಬರು ನೋಂದಣಿ ಮಾಡಿಸಿದ್ದು, ಯುವತಿಯೊಬ್ಬಳು ತನ್ನ ಹೆಸರನ್ನು ಕಾರ್ತಿಕ್ ಶುಕ್ಲಾ ಎಂದು ಹೇಳಿಕೊಂಡಿದ್ದಲ್ಲದೇ ಅದಕ್ಕೆ ಪೂರಕವಾಗಿ ಸಾಮೂಹಿಕ ಕಾರ್ಯಕ್ರಮ ಆಯೋಜಕರ ಬಳಿ ನಕಲಿ ದಾಖಲೆಗಳನ್ನು ಹಾಜರುಪಡಿಸಿದ್ದರೆನ್ನಲಾಗಿದೆ. ಇಬ್ಬರ ವಿವಾಹವೂ ನೆರವೇರಿದ್ದು, ಈ ಫೋಟೋ ಮಾಧ್ಯಮಗಳಲ್ಲಿ ಪ್ರಕಟಗೊಂಡ ವೇಳೆ ಕೆಲವರಿಗೆ ಅನುಮಾನ ಬಂದಿದ್ದು, ಈ ಕುರಿತು ಮಾಹಿತಿ ನೀಡಿದ್ದಾರೆ.

ಪೊಲೀಸರು ವಿಚಾರಣೆಗೆ ಮುಂದಾದಾಗ ಅಸಲಿಯತ್ತು ಬಹಿರಂಗವಾಗಿದ್ದು, ಆದರೆ ಯುವತಿಯರ ಕುಟುಂಬದವರು ಯಾವುದೇ ದೂರು ನೀಡದ ಕಾರಣ ಪೊಲೀಸರು ಕ್ರಮಕ್ಕೆ ಮುಂದಾಗಿಲ್ಲ. ಅಲ್ಲದೇ ಇಬ್ಬರೂ ಪ್ರಾಪ್ತ ವಯಸ್ಕರಾಗಿರುವ ಕಾರಣ ಒಟ್ಟಿಗೆ ವಾಸಿಸದಂತೆ ಹೇಳಲೂ ಸಾಧ್ಯವಾಗದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...