alex Certify
ಕನ್ನಡ ದುನಿಯಾ       Mobile App
       

Kannada Duniya

ಸಲಿಂಗಕಾಮಿಗಳಿಗೆ ಖುಷಿ ಸುದ್ದಿ ನೀಡಿದ ಸುಪ್ರೀಂ

ಸಲಿಂಗ ಸಂಗ ಕಾನೂನು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯಿಟ್ಟಿದೆ. 2013 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಮರು ಪರಿಶೀಲನೆ ನಡೆಸಲು ಒಪ್ಪಿಗೆ ನೀಡಿದೆ. 2009 ರಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು 2013 ರಲ್ಲಿ ಸುಪ್ರೀಂ ಕೋರ್ಟ್ ಅಸಿಂಧುಗೊಳಿಸಿತ್ತು. ಸಲಿಂಗ ಸಂಗ ದಂಡನೀಯ ಅಪರಾಧವೆಂದು ತೀರ್ಪು ನೀಡಿತ್ತು.

ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ಪೀಠ ಎಲ್ ಜಿ ಬಿ ಟಿ ನಾಗರಿಕರಿಂದ ದಾಖಲೆಯಾದ ಮನವಿಯನ್ನು ದೊಡ್ಡ ಪೀಠಕ್ಕೆ ಹಸ್ತಾಂತರ ಮಾಡಿದೆ. ನಾಝ್ ಪೌಂಡೇಶನ್ ಪ್ರಕರಣವನ್ನು ಮತ್ತೆ ಪರಿಶೀಲನೆ ಮಾಡುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 2013ರ ತೀರ್ಪನ್ನು ಮತ್ತೆ ಪರಿಶೀಲಿಸುವ ಅಗತ್ಯವಿದೆ. ಇದ್ರಲ್ಲಿ ಸಂವಿಧಾನಿಕ ಅಂಶ ಅಡಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅರ್ಜಿದಾರರಿಗೆ ಒಂದು ಪ್ರತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡುವಂತೆ ಸುಪ್ರೀಂ ಸೂಚನೆ ನೀಡಿದೆ. ಈ ವಿಷ್ಯದಲ್ಲಿ ಕೇಂದ್ರ ಸರ್ಕಾರ ತನ್ನ ಅಭಿಪ್ರಾಯವನ್ನು ಕೋರ್ಟ್ ಮುಂದೆ ಹೇಳಬೇಕಿದೆ. 2013ರಲ್ಲಿ ಸುಪ್ರೀಂ ನೀಡಿದ ತೀರ್ಪು ಕೇಳಿ ದುಃಖಿತರಾಗಿದ್ದ ಸಲಿಂಗಕಾಮಿಗಳು ಈಗ ಸ್ವಲ್ಪ ನಿರಾಳರಾಗಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...