alex Certify
ಕನ್ನಡ ದುನಿಯಾ       Mobile App
       

Kannada Duniya

ಒಂಟಿ ಮಹಿಳೆಯರಿಗೆ ಸಿಗುತ್ತೆ 1000 ರೂ. ವೇತನ

kcr-s

ಹೈದರಾಬಾದ್: ಒಂಟಿ ಮಹಿಳೆಯರಿಗೆ ಜೀವನ ಭದ್ರತೆ ಕಲ್ಪಿಸುವ ಉದ್ದೇಶದಿಂದ, ತೆಲಂಗಾಣ ಸರ್ಕಾರ ಹೊಸ ಯೋಜನೆ ಪ್ರಕಟಿಸಿದೆ.

ಪ್ರತಿ ತಿಂಗಳು ಒಂಟಿ ಮಹಿಳೆಯರಿಗೆ 1000 ರೂ ವೇತನವನ್ನು ನೀಡುವುದಾಗಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಶುಕ್ರವಾರ ವಿಧಾನಸಭೆಯಲ್ಲಿ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ತೆಲಂಗಾಣದಲ್ಲಿ ಸುಮಾರು 2-3 ಲಕ್ಷ ಒಂಟಿ ಮಹಿಳೆಯರು ಸಂಕಷ್ಟದಲ್ಲಿದ್ದಾರೆ. ಅವರ ಜೀವನದ ಅಗತ್ಯತೆಗಳಿಗೆ ವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ಮಾರ್ಚ್ ತಿಂಗಳಲ್ಲಿ ಮಂಡನೆಯಾಗಲಿರುವ ಬಜೆಟ್ ನಲ್ಲಿ ಅನುದಾನ ಕಾಯ್ದಿರಿಸಲಾಗುವುದು. ಮುಂದಿನ ಹಣಕಾಸು ವರ್ಷದಿಂದಲೇ ಹೊಸ ಯೋಜನೆ  ಜಾರಿಗೆ ಬರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...