alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿ ತಿಮ್ಮಪ್ಪನ ಹುಂಡಿಯಲ್ಲಿದೆ 25 ಕೋಟಿ ರೂ. ಮೌಲ್ಯದ ನಿಷೇಧಿತ ನೋಟು

ತಿರುಪತಿಯ ವೆಂಕಟೇಶ್ವರ ದೇವಾಲಯದ ಹುಂಡಿಯಲ್ಲಿ 25 ಕೋಟಿ ರೂಪಾಯಿ ಮೌಲ್ಯದ ಹಳೆ ನೋಟುಗಳು ಸಂಗ್ರಹವಾಗಿವೆ. ಕೇಂದ್ರ ಸರ್ಕಾರ ನಿಷೇಧ ಮಾಡಿದ್ದ 1000 ಹಾಗೂ 500 ರೂಪಾಯಿಯ ಹಳೆ ನೋಟುಗಳನ್ನು ಭಕ್ತರು ತಿಮ್ಮಪ್ಪನ ಹುಂಡಿಗೆ ಹಾಕಿ ಕೃತಾರ್ಥರಾಗ್ತಿದ್ದಾರೆ.

ಹಳೆ ನೋಟುಗಳ ಬದಲಾವಣೆಗೆ ಕೇಂದ್ರ ಸರ್ಕಾರ ನಿಗದಿ ಮಾಡಿದ್ದ ಗಡುವು ಈಗಾಗ್ಲೇ ಮುಕ್ತಾಯವಾಗಿದೆ. ಹಾಗಾಗಿ 25 ಕೋಟಿ ಮೌಲ್ಯದ ಹಳೆ ನೋಟುಗಳನ್ನು ಬದಲಾಯಿಸಿಕೊಡುವಂತೆ ತಿರುಮಲ ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿ, ಆರ್ ಬಿ ಐ ಗೆ ಪತ್ರ ಬರೆದಿದೆ.

ಭಕ್ತರ ಗೌರವಾರ್ಥವಾಗಿ ನೋಟು ಬದಲಾವಣೆ ಮಾಡಿಕೊಡಿ ಅಂತಾ ಕೇಳಿದೆ. ಆರ್ ಬಿ ಐನಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ ಅಂತಾ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿಯವರೆಗೆ ಹಳೆ ನೋಟುಗಳನ್ನು ದೇವಾಲಯದಲ್ಲೇ ಸುರಕ್ಷಿತವಾಗಿ ಇಡಲಾಗುತ್ತದೆ ಅಂತಾ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...