alex Certify
ಕನ್ನಡ ದುನಿಯಾ       Mobile App
       

Kannada Duniya

ಲವರ್ ಮನೆಯಲ್ಲೇ ಪತ್ತೆಯಾಯ್ತು ಪ್ರಿಯತಮೆ ಶವ

murder tyui

ನವದೆಹಲಿ: ಅವರಿಬ್ಬರು ಪ್ರೀತಿಸುತ್ತಿದ್ದರು. ಆದರೆ, ಇಬ್ಬರ ಮನೆಯಲ್ಲೂ ಮದುವೆ ಮಾಡಲು ವಿರೋಧ ವ್ಯಕ್ತಪಡಿಸಿದ್ದರು. ಯುವತಿ ಮದುವೆಯಾದರೆ ನಿನ್ನನ್ನೇ ಆಗುವುದು ಎಂದರೆ, ಯುವಕ ಮಾತ್ರ ಪೋಷಕರ ಮಾತು ಕೇಳಿ ಬೇರೆ ಹುಡುಗಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ.

ಇದರಿಂದಾಗಿ ಇಬ್ಬರೂ ಜಗಳವಾಡಿಕೊಂಡಿದ್ದು, ಯುವಕನ ಮನೆಯಲ್ಲಿಯೇ ಆಕೆ ಅನುಮಾನಾಸ್ಪದ ರೀತಿಯಲ್ಲಿ ಸಾವು ಕಂಡಿದ್ದಾಳೆ. ನವದೆಹಲಿಯ ಲಕ್ಷ್ಮೀಬಾಯಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಯುವತಿ, ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ, ಇಬ್ಬರ ಮನೆಯಲ್ಲಿಯೂ ಮದುವೆಗೆ ಒಪ್ಪಿರಲಿಲ್ಲ. ನವೀನ್, ಮನೆಯವರ ಒತ್ತಡಕ್ಕೆ ಮಣಿದು ಬೇರೆ ಮದುವೆ ಮಾಡಿಕೊಳ್ಳಲು ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ. ಇದೇ ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಬಳಿಕ ಆಕೆ ಸಾವನ್ನಪ್ಪಿದ್ದಾಳೆ. ಆಕೆಯ ಸಾವಿನ ಹಿಂದೆ ನವೀನ್ ಪಾತ್ರವಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.

ಯುವತಿ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದು, ನಂತರ ನಾಪತ್ತೆಯಾಗಿದ್ದಳು. ಪೋಷಕರು ನಾಪತ್ತೆ ದೂರು ದಾಖಲಿಸಿದ್ದರು. ತನಿಖೆಯ ಸಂದರ್ಭದಲ್ಲಿ ಆಕೆ ತನ್ನ ಪ್ರಿಯತಮ ನವೀನ್ ಮನೆಯಲ್ಲಿಯೇ ಶವವಾಗಿ ಕಂಡುಬಂದಿದ್ದಾಳೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...