alex Certify
ಕನ್ನಡ ದುನಿಯಾ       Mobile App
       

Kannada Duniya

ಅಡುಗೆ ಅನಿಲ ಗ್ರಾಹಕರಿಗೆ ಶಾಕಿಂಗ್ ನ್ಯೂಸ್

lpg 1

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಮೊದಲೇ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿತ್ತು. ಇದೀಗ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.

ಶನಿವಾರ ರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆಯನ್ನು ಲೀಟರ್ ಗೆ 1.06 ಹಾಗೂ ಡೀಸೆಲ್ ಬೆಲೆಯನ್ನು ಲೀಟರ್ ಗೆ 2.94 ರೂ.ಏರಿಕೆ ಮಾಡಲಾಗಿತ್ತು. ಇದೀಗ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ. ಪ್ರತಿ 14.42 ಕೆಜಿ ಸಿಲಿಂಡರ್ ಬೆಲೆಯನ್ನು 18 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಸೀಮೆಎಣ್ಣೆ ಬೆಲೆಯನ್ನು ಹೆಚ್ಚಿಸಲಾಗಿದ್ದು, ಪ್ರತಿ ಲೀಟರ್ ಸೀಮೆ ಎಣ್ಣೆ ಬೆಲೆ 3 ರೂ. ಏರಿಕೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಯನ್ನು ಆಧರಿಸಿ ದೇಶೀಯ ಮಾರುಕಟ್ಟೆಯಲ್ಲಿ ಪ್ರತಿ 15 ದಿನಕ್ಕೊಮ್ಮೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗುತ್ತದೆ. ಅದೇ ರೀತಿ ಅಡುಗೆ ಅನಿಲ ಬೆಲೆಯನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...