alex Certify
ಕನ್ನಡ ದುನಿಯಾ       Mobile App
       

Kannada Duniya

ಎಲ್.ಪಿ.ಜಿ. ಗ್ರಾಹಕರಿಗೊಂದು ಶಾಕಿಂಗ್ ನ್ಯೂಸ್ !

LPG_2

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಬಡ, ಮಧ್ಯಮ ವರ್ಗದವರು ಜೀವನ ನಡೆಸುವುದು ಕಷ್ಟಸಾಧ್ಯವಾಗಿದೆ. ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಅನ್ಯ ಮಾರ್ಗವಿಲ್ಲದೇ, ಇರುವ ವ್ಯವಸ್ಥೆಗೆ ಹೊಂದಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.

ಬೆಲೆ ಏರಿಕೆ ಇರಲಿ, ಎಲ್.ಪಿ.ಜಿ. ವಿಷಯಕ್ಕೆ ಬರೋಣ. ಗ್ಯಾಸ್ ಸಿಲಿಂಡರ್ ಗಳಿಗೆ ಮೊದಲು ಯಾವುದೇ ಸಮಸ್ಯೆ ಇರಲಿಲ್ಲ. ನಂತರ ವರ್ಷಕ್ಕೆ 12 ಸಿಲಿಂಡರ್ ಗಳಿಗೆ ಮಾತ್ರ ಸಬ್ಸಿಡಿ ನೀಡುವುದಾಗಿ ತಿಳಿಸಲಾಗಿತ್ತು. ಅದಕ್ಕಿಂತ ಹೆಚ್ಚಿನ ಸಿಲಿಂಡರ್ ಬೇಕೆಂದರೆ ಪೂರ್ಣ ಬೆಲೆ ಪಾವತಿಸಿ ಖರೀದಿಸಬೇಕಿತ್ತು. ಈಗ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ ಎಂಬ ಕಾರಣದಿಂದ ಸಬ್ಸಿಡಿ ಸಿಲಿಂಡರ್ ಗಳನ್ನು ಇಳಿಕೆ ಮಾಡಲು ಮುಂದಾಗಿದ್ದು, ಇನ್ನು ಮುಂದೆ ವರ್ಷಕ್ಕೆ ಕೇವಲ 10 ಸಿಲಿಂಡರ್ ಗಳಿಗೆ ಮಾತ್ರ ಸಬ್ಸಿಡಿ ನೀಡಲಾಗುವುದು.

ಸಂಸತ್ ನಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸಬ್ಸಿಡಿ ಸಿಲಿಂಡರ್ ಮಿತಿಯನ್ನು 10 ಕ್ಕೆ ಇಳಿಸಬೇಕಾದ ಅಗತ್ಯವಿದೆ ಎಂದು ಪ್ರಸಕ್ತ ಸಾಲಿನ ಆರ್ಥಿಕ ಸಮೀಕ್ಷೆ ಸಲಹೆ ನೀಡಿರುವುದಾಗಿ ತಿಳಿಸಿದ್ದಾರೆ. ಪ್ರಸ್ತುತ 14.2 ಕೆಜಿಯ 12 ಸಿಲಿಂಡರ್ ಗಳಿಗೆ ಸಬ್ಸಿಡಿ ಕೊಡಲಾಗುತ್ತಿದೆ. 10 ಕ್ಕೆ ಇಳಿಸಿದರೆ ನಂತರ ಸಿಲಿಂಡರ್ ಅಗತ್ಯವಿದ್ದರೆ ಮಾರುಕಟ್ಟೆಯ ಬೆಲೆ ನೀಡಿ ಖರೀದಿಸಬೇಕಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...