alex Certify
ಕನ್ನಡ ದುನಿಯಾ       Mobile App
       

Kannada Duniya

ಇಲ್ಲಿದೆ ನೋಡಿ ಮೋದಿಯವರ ಡಿಗ್ರಿ ಸರ್ಟಿಫಿಕೇಟ್

modi degree certificateಪ್ರಧಾನಿ ನರೇಂದ್ರ ಮೋದಿಯವರ ಪದವಿ ಕುರಿತಂತೆ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿರುವ ಭಾರತೀಯ ಜನತಾ ಪಕ್ಷ, ಅವರ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರಮಾಣಪತ್ರಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮೋದಿಯವರ ಪದವಿ ಕುರಿತಂತೆ ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೇಶದ ಜನತೆಯ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

ನರೇಂದ್ರ ಮೋದಿಯವರ ಡಿಗ್ರಿ ಸರ್ಟಿಫಿಕೇಟ್ ಗಳನ್ನು ಬಿಜೆಪಿ ಈಗ ಬಹಿರಂಗಗೊಳಿಸಿದ್ದರೂ ಆಮ್ ಆದ್ಮಿ ಪಕ್ಷ ಮಾತ್ರ ಇದನ್ನು ಒಪ್ಪಲು ತಯಾರಿಲ್ಲ. ಅಮಿತ್ ಶಾ ಅವರು ಪತ್ರಿಕಾಗೋಷ್ಟಿ ನಡೆಸಿದ ಕೆಲ ಹೊತ್ತಿನ ಬಳಿಕ ಆಮ್ ಆದ್ಮಿ ಪಕ್ಷದ ಮುಖಂಡರೂ ಪತ್ರಿಕಾಗೋಷ್ಟಿ ನಡೆಸಿದ್ದು, ಈಗ ಬಿಡುಗಡೆ ಮಾಡಿರುವ ಪ್ರಮಾಣ ಪತ್ರದ ಅಸಲಿಯತ್ತಿನ ಬಗ್ಗೆ ತಕರಾರು ತೆಗೆದಿದ್ದಾರೆ. ಅಲ್ಲದೇ ಹಲವು ಪ್ರಶ್ನೆಗಳನ್ನು ಬಿಜೆಪಿ ನಾಯಕರ ಮುಂದಿಟ್ಟಿದ್ದು, ಇದಕ್ಕೆ ಏನು ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...