alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ಆಯೋಗದ ಇವಿಎಂ ಪ್ರಾತ್ಯಕ್ಷಿಕೆ ಯಶಸ್ವಿ

ev

ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸಿದ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ ಯಶಸ್ವಿಯಾಗಿದೆ. ಇವಿಎಂಗಳಲ್ಲಿ ಅಕ್ರಮ ಎಸಗಲು ಸಾಧ್ಯವಿಲ್ಲ ಎಂಬುದನ್ನು ಆಯೋಗ ಸಾಬೀತುಪಡಿಸಿದೆ. ಹಾಗಾಗಿ ಮತಯಂತ್ರ ದೋಷದಿಂದಾಗಿಯೇ ಬಿಜೆಪಿ ಗೆಲುವು ಸಾಧಿಸಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಬ್ರೇಕ್ ಬಿದ್ದಂತಾಗಿದೆ.

ಇವಿಎಂ ಅನ್ನು ತಿರುಚಲು ಸಾಧ್ಯವಿಲ್ಲ, ಆದ್ರೆ ವಿಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಅಂತಾ ಭಾರತೀಯ ವಿದ್ಯುನ್ಮಾನ ನಿಗಮದ ತಾಂತ್ರಿಕ ಅಧಿಕಾರಿ ಬಿ.ಪಿ. ಮಿಶ್ರಾ ಹೇಳಿದ್ದಾರೆ. ಇವಿಎಂಗಳನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸಿದ್ಧಪಡಿಸಲಾಗಿದೆ. ಇವುಗಳನ್ನು ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ ಅಂತಾ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಿದೆ ಎನ್ನುವವರೆಲ್ಲ ಜೂನ್ 3ರಿಂದ ಅದನ್ನು ಸಾಬೀತುಪಡಿಸಿ ಅಂತಾ ಆಯೋಗ ಸವಾಲು ಹಾಕಿದೆ. ಪಂಚರಾಜ್ಯಗಳ ಚುನಾವಣೆಯಲ್ಲಿ ಇವಿಎಂಗಳನ್ನು ಹ್ಯಾಕ್ ಮಾಡಿದ್ದರಿಂದ್ಲೇ ಬಿಜೆಪಿ ಉತ್ತರಪ್ರದೇಶದಲ್ಲಿ ಗೆಲುವು ಸಾಧಿಸಿದೆ ಅಂತಾ ಎಎಪಿ, ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳ ನಾಯಕರು ಗಂಭೀರ ಆರೋಪ ಮಾಡಿದ್ದವು. ಇವಿಎಂಗಳ ಬದಲು ಬ್ಯಾಲೆಟ್ ಪೇಪರ್ ತರುವಂತೆ ಒತ್ತಾಯಿಸಿದ್ದವು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...