alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿ ಸಿಕ್ಕಿಬಿದ್ದ ಪೊಲೀಸ್

ಮಧ್ಯಪ್ರದೇಶದ ಬೇತುಲ್ ನಲ್ಲಿ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಮ್ ನಲ್ಲಿ ನಕಲು ಮಾಡಲು ಪೊಲೀಸ್ ಒಬ್ಬ ಸಹಾಯ ಮಾಡಿರೋ ವಿಡಿಯೋ ವೈರಲ್ ಆಗಿದೆ. ಖಾಕಿ ಸಮವಸ್ತ್ರ ತೊಟ್ಟಿದ್ದ ಪೊಲೀಸ್, ಶಾಲೆಯ ಕಿಟಕಿ ಬಳಿ ನಿಂತು ವಿದ್ಯಾರ್ಥಿಗಳಿಗೆ ಕಾಪಿ ಚೀಟಿ ಕೊಡುತ್ತಿದ್ದ.

ಇದನ್ನು ಗಮನಿಸಿದ ಸ್ಥಳೀಯರು ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಮಧ್ಯಪ್ರದೇಶದಲ್ಲಿ ಮಾರ್ಚ್ 1ರಿಂದ್ಲೇ 12ನೇ ತರಗತಿ ಪರೀಕ್ಷೆಗಳು ಆರಂಭವಾಗಿವೆ. ಮಾರ್ಚ್ 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಶುರುವಾಗಿದೆ.

ಮಾರ್ಚ್ 31ಕ್ಕೆ ಪರೀಕ್ಷೆಗಳು ಕೊನೆಗೊಳ್ಳಲಿವೆ. ಪರೀಕ್ಷಾ ಅಕ್ರಮವನ್ನು ತಡೆಗಟ್ಟಲು ಶಿಕ್ಷಣ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ವಿಡಿಯೋ ರೆಕಾರ್ಡಿಂಗ್ ಮಾಡಲಾಗ್ತಿದೆ.

ಆದ್ರೂ ನಕಲು ತಡೆಯಲು ಇಲಾಖೆ ವಿಫಲವಾಗಿದೆ. ಅದರಲ್ಲೂ ಪೊಲೀಸರೇ ವಿದ್ಯಾರ್ಥಿಗಳಿಗೆ ಸಹಾಯ ಮಾಡಿರೋದು ಆಘಾತ ಮೂಡಿಸಿದೆ. ತಪ್ಪಿತಸ್ಥ ಪೊಲೀಸ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...