alex Certify
ಕನ್ನಡ ದುನಿಯಾ       Mobile App
       

Kannada Duniya

ಬರಿಗೈನಲ್ಲೇ ಶಾಲಾ ಶೌಚಾಲಯ ಸ್ವಚ್ಚಗೊಳಿಸಿದ ಸಂಸದ

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಸ್ವಚ್ಚ ಭಾರತ್ ಅಭಿಯಾನ, ನಿರೀಕ್ಷಿಸಿದ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ. ಇದಕ್ಕೆ ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಸಾರ್ವಜನಿಕರ ಅಸಹಕಾರವೂ ಮುಖ್ಯ ಕಾರಣವಾಗಿದೆ.

ರಾಜಸ್ತಾನ ಆರೋಗ್ಯ ಸಚಿವ ಕಾಳಿಚರಣ್ ಸರಾಫ್ ಅವರ ಫೋಟೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರಿಗೆ ತಿಳಿ ಹೇಳಬೇಕಾದ ಸಚಿವರೇ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿರುವುದು ಫೋಟೋದಲ್ಲಿ ಸೆರೆಯಾಗಿತ್ತು. ಇದಕ್ಕೆ ಉಡಾಫೆಯಿಂದ ಉತ್ತರಿಸಿದ್ದ ಸಚಿವರು, ಅದೇನೂ ಅಂತಹ ದೊಡ್ಡ ವಿಷಯವಲ್ಲವೆಂದಿದ್ದರು.

ಆದರೆ ಮಧ್ಯಪ್ರದೇಶದಲ್ಲಿ ಇದಕ್ಕೆ ವ್ಯತಿರಿಕ್ತವಾದ ಘಟನೆ ನಡೆದಿದೆ. ಪ್ರಧಾನಿ ಮೋದಿಯವರ ಸ್ವಚ್ಚ ಭಾರತ್ ಯೋಜನೆ ಸಾಕಾರಕ್ಕೆ ಶ್ರಮಿಸುತ್ತಿರುವ ಬಿಜೆಪಿ ಸಂಸದ ಜನಾರ್ದನ ಮಿಶ್ರಾ ಎಲ್ಲರಿಗೂ ಮಾದರಿಯಾಗಿದ್ದಾರೆ. ರೇವಾ ಜಿಲ್ಲೆಯಿಂದ ಆಯ್ಕೆಯಾಗಿರುವ ಇವರು ಇತ್ತೀಚೆಗೆ ಶಾಲೆಯೊಂದಕ್ಕೆ ಭೇಟಿ ನೀಡಿದ ವೇಳೆ ಶಾಲಾ ಶೌಚಾಲಯ ಕಸ ಕಡ್ಡಿಗಳಿಂದ ತುಂಬಿಕೊಂಡು ಬಳಸಲು ಬಾರದಂತಾಗಿರುವುದು ಕಂಡಿದೆ. ಇದನ್ನು ನೋಡಿದ ಮಿಶ್ರಾ ಸ್ವತಃ ತಾವೇ ಸರಿಪಡಿಸಲು ಮುಂದಾಗಿದ್ದಾರೆ. ಬರಿಗೈನಿಂದಲೇ ಶೌಚಾಲಯದಲ್ಲಿ ತುಂಬಿಕೊಂಡಿದ್ದ ಕಸಕಡ್ಡಿಯನ್ನೆಲ್ಲಾ ತೆಗೆದು ಬಳಕೆಗೆ ಬರುವಂತೆ ಮಾಡಿದ್ದಾರೆ.

ಇಷ್ಟೇ ಅಲ್ಲ, ಕೆಲ ದಿನಗಳ ಹಿಂದೆ ಇದೇ ರೀತಿ ಶಾಲೆಯೊಂದಕ್ಕೆ ಪರಿಶೀಲನೆಗಾಗಿ ಭೇಟಿ ನೀಡಿದಾಗ ವಿದ್ಯಾರ್ಥಿಗಳ ಉಗುರನ್ನು ಸ್ವತಃ ತಾವೇ ಕತ್ತರಿಸಿ ಸ್ವಚ್ಚತೆಯ ಮಹತ್ವ ವಿವರಿಸಿದ್ದರು. ಅಲ್ಲದೇ ಸ್ನಾನ ಮಾಡದೆ ಬಂದಿದ್ದ ಕೆಲ ವಿದ್ಯಾರ್ಥಿಗಳಿಗೆ ತಾವೇ ಸ್ನಾನ ಮಾಡಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...