alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆಯ ಅವ್ಯವಸ್ಥೆಗೆ ಬಲಿಯಾಯ್ತು 4 ವರ್ಷದ ಮಗು

ಮಧ್ಯಪ್ರದೇಶದ ನಂಡ್ಲೆಟಾ ಗ್ರಾಮದಲ್ಲಿ ಸೂಕ್ತ ಸಮಯಕ್ಕೆ ಆಂಬ್ಯುಲೆನ್ಸ್ ದೊರೆಯದೇ 4 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಗ್ರಾಮದಿಂದ 20 ಕಿಮೀ ದೂರದಲ್ಲಿರೋ ರತ್ಲಂ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ಬೈಕ್ ನಲ್ಲೇ ಕರೆತರಲಾಯ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ.

ಮೃತದೇಹವನ್ನು ಆಸ್ಪತ್ರೆಯಿಂದ ತರುವ ಸಂದರ್ಭದಲ್ಲಿ ಕೂಡ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಲ್ಲ. ಹೆತ್ತವರು ಮಗುವಿನ ಶವವನ್ನು ಬೈಕ್ ನಲ್ಲೇ ಮನೆಗೆ ತಂದಿದ್ದಾರೆ. ಘನಶ್ಯಾಮನಾಥ್ ಎಂಬಾತನ 4 ವರ್ಷದ ಮಗಳು ಜೀಜಾ ವಿಪರೀತ ಜ್ವರದಿಂದ ಬಳಲುತ್ತಿದ್ಲು.

ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಅವರು ಜಿಲ್ಲಾಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ. ಆದ್ರೆ ಅಲ್ಲಿ ಆಂಬ್ಯುಲೆನ್ಸ್ ಸೌಲಭ್ಯ ಇರಲಿಲ್ಲ. ಮಗುವಿಗೆ ಡ್ರಿಪ್ ಹಾಕಿಕೊಂಡು, ಬಾಟಲಿಯನ್ನು ಕೈಯಲ್ಲಿ ಹಿಡಿದು ತಾಯಿ ಬೈಕ್ ನಲ್ಲಿ ಕುಳಿತಿದ್ಲು. ಆಸ್ಪತ್ರೆಗೆ ಬರುವ ವೇಳೆಗೆ ಮಗು ಬದುಕಿತ್ತು, ಆದ್ರೆ ಚಿಕಿತ್ಸೆ ಫಲಕಾರಿಯಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...