alex Certify
ಕನ್ನಡ ದುನಿಯಾ       Mobile App
       

Kannada Duniya

ಗೋ ರಕ್ಷಣೆಗಾಗಿ ಪ್ಲಾಸ್ಟಿಕ್ ಕವರ್ ನಿಷೇಧ

plasticbag

ಮಧ್ಯಪ್ರದೇಶದಲ್ಲಿ ಮೇ 1ರಿಂದ ಪಾಲಿಥಿನ್ ಹಾಗೂ ಪ್ಲಾಸ್ಟಿಕ್ ಕವರ್ ಗಳಿಗೆ ನಿಷೇಧ ಹೇರಲಾಗಿದೆ. ಸಿಂಥೆಟಿಕ್ ಉತ್ಪನ್ನಗಳನ್ನು ತಿಂದು ಗೋವುಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ನಿಷೇಧಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಳೆದ ಜನವರಿಯಿಂದ್ಲೇ ಮಧ್ಯಪ್ರದೇಶದ ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳಲ್ಲಿ ಪ್ಲಾಸ್ಟಿಕ್ ಮತ್ತು ಪಾಲಿಥಿನ್ ಕ್ಯಾರಿ ಬ್ಯಾಗ್ ಗಳ ಬಳಕೆ ನಿರ್ಬಂಧಿಸಲಾಗಿತ್ತು. ಇನ್ಮುಂದೆ ಈ ನಿಯಮ ಎಲ್ಲಾ ಕಡೆಗಳಲ್ಲೂ ಅನ್ವಯವಾಗಲಿದೆ.

ಗೋವುಗಳ ರಕ್ಷಣೆ ಹಾಗೂ ಪರಿಸರ ಸಂರಕ್ಷಣೆಗಾಗಿ ಈ ಕಟ್ಟುನಿಟ್ಟಿನ ನಿಯಮ ಜಾರಿ ಮಾಡುತ್ತಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಮೇ 1ರ ನಂತರ ಯಾರಾದ್ರೂ ಪ್ಲಾಸ್ಟಿಕ್ ಕವರ್ ಬಳಸಿರುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ನಾಲ್ಕು ವರ್ಷಗಳ ಹಿಂದೆಯೇ ಮಧ್ಯಪ್ರದೇಶ, ರಾಜಸ್ತಾನ ಮತ್ತು ಚತ್ತೀಸ್ ಗಢದಲ್ಲಿ ಪಾಲಿಥಿನ್ ಮತ್ತು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಗಳ ಬಳಕೆಗೆ ನಿಷೇಧ ಹೇರುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನ ನೀಡಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...