alex Certify
ಕನ್ನಡ ದುನಿಯಾ       Mobile App
       

Kannada Duniya

ಹಿರಿಯ ಬಿಜೆಪಿ ನಾಯಕ ಪಾಂಡುರಂಗ ಫುಂಡ್ಕರ್ ಇನ್ನಿಲ್ಲ

ಮಹಾರಾಷ್ಟ್ರದ ಪ್ರಭಾವಿ ಬಿಜೆಪಿ ನಾಯಕ ಹಾಗೂ ಹಾಲಿ ಕೃಷಿ ಸಚಿವ ಪಾಂಡುರಂಗ ಫುಂಡ್ಕರ್ (67) ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ಆರೋಗ್ಯ ತೊಂದರೆಯಿಂದ ಬಳಲುತ್ತಿದ್ದ ಅವರು, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಪಾಂಡುರಂಗ ಪುಂಡ್ಕರ್ ಅವರು ಸಂಸದರಾಗಿ, ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. ಮಹಾರಾಷ್ಟ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೂ ಪಕ್ಷವನ್ನು ಸಂಘಟಿಸಿದ್ದರು.

ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಂಪುಟಕ್ಕೆ ಸೇರಿದ್ದ ಪಾಂಡುರಂಗ ಫುಂಡ್ಕರ್, ಕೃಷಿ ಸಚಿವರಾಗಿ ಸಮರ್ಥವಾಗಿ ಖಾತೆಯನ್ನು ನಿಭಾಯಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...