alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರದಿಂದ ರೈತರ ಸಾಲಮನ್ನಾ ಘೋಷಣೆ

sal-mhar

ಮುಂಬೈ: ಸಾಲಮನ್ನಾ ಮಾಡಬೇಕೆಂದು ಮಹಾರಾಷ್ಟ್ರ ರೈತರು ನಡೆಸುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ರಾಜ್ಯದ ರೈತರ ಸಾಲಮನ್ನಾ ಮಾಡುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಶೀಘ್ರವೇ ರೈತರ ಸಾಲಮನ್ನಾ ಮಾಡುವ ಕುರಿತಾಗಿ ಮಾನದಂಡಗಳನ್ನು ನಿರ್ಧರಿಸಲು ಸಮಿತಿ ರಚಿಸಲಾಗುವುದು ಎಂದು ಕಂದಾಯ ಸಚಿವ ಚಂದ್ರಕಾಂತ್ ಪಾಟೀಲ್ ತಿಳಿಸಿದ್ದಾರೆ.

ಸಾಲಮನ್ನಾ, ಉಚಿತ ವಿದ್ಯುತ್, ಬೆಳೆಗಳಿಗೆ ಬೆಂಬಲ ಬೆಲೆ, ನೀರಾವರಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಹೋರಾಟ ಕೈಗೊಂಡಿದ್ದರು.

ಸರ್ಕಾರ ಸ್ಪಷ್ಟ ಭರವಸೆ ನೀಡಿದ ಹಿನ್ನಲೆಯಲ್ಲಿ ಹೋರಾಟವನ್ನು ನಿಲ್ಲಿಸಿದ್ದೇವೆ. ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ, ಮತ್ತೆ ಹೋರಾಟ ಕೈಗೊಳ್ಳಲಾಗುವುದು ಎಂದು ರೈತ ಸಂಘಟನೆಯ ಮುಖಂಡ ರಾಜು ಶೆಟ್ಟಿ ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...