alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಾದಕ್ಕೆ ಕಾರಣವಾಗಿದೆ ಮಹಾರಾಷ್ಟ್ರ ಶಿಕ್ಷಣ ಇಲಾಖೆಯ ಸುತ್ತೋಲೆ

ರಾಜ್ಯ ಸರ್ಕಾರಿ ಶಾಲೆಗಳಿಗೆ ವಿತರಿಸಲು ಮಹಾರಾಷ್ಟ್ರ ಶಿಕ್ಷಣ ಇಲಾಖೆ ಖಾಸಗಿ ಪ್ರಕಾಶನ ಸಂಸ್ಥೆಗಳಿಂದ ಪುಸ್ತಕದ ಖರೀದಿಗೆ ಮುಂದಾಗಿದ್ದು, ಇದಕ್ಕಾಗಿ ಹೊರಡಿಸಿರುವ ಸುತ್ತೋಲೆಯೊಂದು ಈಗ ವಿವಾದವನ್ನು ಹುಟ್ಟುಹಾಕಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ 1,49,954 ಪುಸ್ತಕ ಖರೀದಿಗೆ ಆದೇಶಿಸಿದ್ದರೆ ಮಹಾತ್ಮಗಾಂಧಿಯವರ 4,343 ಪುಸ್ತಕ ಹಾಗೂ ನೆಹರು ಕುರಿತು 1,635 ಪುಸ್ತಕಗಳನ್ನು ಮಾತ್ರ ಖರೀದಿಸಲು ಸೂಚಿಸಲಾಗಿದೆ.

ಛತ್ರಪತಿ ಶಿವಾಜಿ ಕುರಿತಾದ 3,40,982, ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಕುರಿತಾದ 3,21,328 ಪುಸ್ತಕ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತ 79,388 ಪುಸ್ತಕ ಮತ್ತು ಬಿಜೆಪಿ ಹಿರಿಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕುರಿತ 76,713 ಪುಸ್ತಕಗಳ ಖರೀದಿಗೆ ಆರ್ಡರ್ ಮಾಡಲಾಗಿದೆ.

ಸರ್ಕಾರದ ಈ ತೀರ್ಮಾನ ಪ್ರತಿಪಕ್ಷ ಕಾಂಗ್ರೆಸ್ ನ್ನು ತೀವ್ರವಾಗಿ ಕೆರಳಿಸಿದ್ದು, ಸ್ವಾತಂತ್ರ್ಯ ಹೋರಾಟಗಾರರನ್ನು ತೆರೆಮರೆಗೆ ಸರಿಸಲು ಮಹಾರಾಷ್ಟ್ರದ ಬಿಜೆಪಿ ಸರ್ಕಾರ ಯತ್ನಿಸುತ್ತಿದೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಚವ್ಹಾಣ್ ಆರೋಪಿಸಿದ್ದಾರೆ. ದೇಶಕ್ಕೆ ಯಾವುದೇ ಕೊಡುಗೆಯನ್ನು ನೀಡದ ದೀನ್ ದಯಾಳ್ ಉಪಾಧ್ಯಾಯರ ಕುರಿತಾದ ಪುಸ್ತಕಗಳಿಗೆ ಸರ್ಕಾರ ದುಂದುವೆಚ್ಚ ಮಾಡುತ್ತಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...