alex Certify
ಕನ್ನಡ ದುನಿಯಾ       Mobile App
       

Kannada Duniya

ಮಧುರೈ ಮೀನಾಕ್ಷಿ ದೇವಾಲಯದಲ್ಲಿ ಬೆಂಕಿ ಅನಾಹುತ

ತಮಿಳುನಾಡಿನಲ್ಲಿರುವ ಮದುರೈ ಮೀನಾಕ್ಷಿ ದೇವಾಲಯದ ಆವರಣದಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ. 30ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ರಾತ್ರಿ ಸುಮಾರು 10 ಗಂಟೆ ವೇಳೆಗೆ ಆಟಿಕೆಗಳ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ, ಕ್ಷಣಮಾತ್ರದಲ್ಲಿ 40 ಅಂಗಡಿಗಳನ್ನು ಭಸ್ಮ ಮಾಡಿದೆ.

60 ಅಗ್ನಿಶಾಮಕ ಸಿಬ್ಬಂದಿ ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾರಿಗೂ ಗಾಯ ಅಥವಾ ಪ್ರಾಣಾಪಾಯವಾಗಿಲ್ಲ. ದೇವಾಲಯದ ಕಟ್ಟಡದಲ್ಲಿ ಗೂಡು ಕಟ್ಟಿಕೊಂಡಿದ್ದ ಹಲವು ಪಾರಿವಾಳಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿ ಅವಘಡಕ್ಕೆ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಮಾಡ್ತಿದ್ದಾರೆ. ದೇವಾಲಯದಲ್ಲಿ ಯಾವುದೇ ರೀತಿಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿರಲಿಲ್ಲ ಅಂತಾನೂ ಹೇಳಲಾಗ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...