alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತಿಭಟನಾನಿರತ ವಿದ್ಯಾರ್ಥಿನಿಯರ ಕೂದಲು ಹಿಡಿದೆಳೆದ ಪೊಲೀಸರು

ಉತ್ತರ ಪ್ರದೇಶದ ಅಲಹಾಬಾದ್ ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿನಿಯರೊಂದಿಗೆ ಅಮಾನುಷವಾಗಿ ವರ್ತಿಸಿದ್ದು, ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶನಿವಾರದಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಅಲಹಾಬಾದ್ ಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅಲಹಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರು ಕಪ್ಪು ಬಟ್ಟೆ ಹಿಡಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಆಗ ಪ್ರತಿಭಟನಾನಿರತ ವಿದ್ಯಾರ್ಥಿನಿಯರ ಕೂದಲನ್ನು ಹಿಡಿದು ರಸ್ತೆ ಬದಿಗೆ ಎಳೆದು ತಂದ ಪೊಲೀಸರು ಲಾಠಿಯಿಂದ ಮನಬಂದಂತೆ ಥಳಿಸಿದ್ದಾರೆ. ಅಷ್ಟೇ ಅಲ್ಲ ಒಬ್ಬಾಕೆಯ ತಲೆಯನ್ನು ಪೊಲೀಸ್ ವಾಹನಕ್ಕೆ ಬಲವಾಗಿ ಗುದ್ದಿಸಿದ್ದಾರೆ. ವ್ಯಕ್ತಿಯೊಬ್ಬರು ಈ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು, ಇದನ್ನು ವೀಕ್ಷಿಸಿದವರೆಲ್ಲರೂ ಪೊಲೀಸರ ಅಮಾನುಷ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...