alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗ್ಬೇಕೆಂಬ ಬಗ್ಗೆ ಮಮತಾ ಹೇಳಿದ್ದೇನು?

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕೆಂಬ ಬೇಡಿಕೆಯನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ನಾಯಕ ಒಮರ್ ಅಬ್ದುಲ್ಲಾ ಜೊತೆ ಮಾತನಾಡಿದ ಮಮತಾ ಬ್ಯಾನರ್ಜಿ, ಮುಂದಿನ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿ ಹೆಸರು ಘೋಷಣೆ ಮಾಡಬಾರದೆಂದು ಮಮತಾ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ರೆ ಪ್ರಾದೇಶಿಕ ಪಕ್ಷಗಳ ಏಕತೆ ವಿಭಜನೆಯಾಗುವ ಸಾಧ್ಯತೆಯಿದೆ ಎಂದು ಮಮತಾ ಹೇಳಿದ್ದಾರೆ.

ಬಿಜೆಪಿ ಮಣಿಸಲು ಪ್ರಾದೇಶಿಕ ಪಕ್ಷಗಳು ಒಂದಾಗಬೇಕು. ದೇಶಕ್ಕಾಗಿ ಪಕ್ಷಗಳು ತ್ಯಾಗ ಮಾಡಬೇಕೆಂದು ಮಮತಾ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಒಮರ್ ಅಬ್ದುಲ್ಲಾ, ಕಾಂಗ್ರೆಸ್ ಇಲ್ಲದೆ ಪ್ರಾದೇಶಿಕ ಪಕ್ಷಗಳ ಐಕ್ಯತೆ ಫಲ ನೀಡುವುದಿಲ್ಲ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಹೇಗೆ ಮಣಿಸಬೇಕೆನ್ನುವ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರಂತೆ. ಚುನಾವಣೆ ಹತ್ತಿರವಾಗ್ತಿದ್ದು,ಆದಷ್ಟು ಬೇಗ ಒಂದು ತೀರ್ಮಾನಕ್ಕೆ ಬರುತ್ತೇವೆಂದು ಅಬ್ದುಲ್ಲಾ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...