alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ! 40 ವರ್ಷದ ವ್ಯಕ್ತಿ ಮೇಲೆ ಸಾಮೂಹಿಕ ಅತ್ಯಾಚಾರ

death

ಹೈದರಾಬಾದ್: 40 ವರ್ಷದ ವ್ಯಕ್ತಿಯೊಬ್ಬನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ದುಷ್ಕರ್ಮಿಗಳು ಬಳಿಕ ಆತನ ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಅಫ್ಜಲ್ಗಂಜ್ ಪ್ರದೇಶದಲ್ಲಿ ನಡೆದಿದೆ.

ಈ ಪ್ರದೇಶದ ಬಾರ್ ಒಂದರ ಸಮೀಪ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿಯ ಕೈ ಕಾಲುಗಳನ್ನು ಕಟ್ಟಿ ಹಾಕಿರುವ ವಿಕೃತ ಕಾಮುಕರು ಬಳಿಕ ಸಾಮೂಹಿಕ ಅತ್ಯಾಚಾರವೆಸಗಿ ಆತನ ಕೊಲೆ ಮಾಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕೃತ್ಯದ ಕುರಿತಂತೆ ಕೆಲವೊಂದು ಸಾಕ್ಷ್ಯಗಳು ಪೊಲೀಸರಿಗೆ ಲಭ್ಯವಾಗಿದೆ ಎನ್ನಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...