alex Certify
ಕನ್ನಡ ದುನಿಯಾ       Mobile App
       

Kannada Duniya

31 ಲಕ್ಷ ರೂ. ಮೌಲ್ಯದ ಚಿನ್ನವನ್ನು ಈತ ಅಡಗಿಸಿಟ್ಟುಕೊಂಡಿದ್ದೆಲ್ಲಿ ಗೊತ್ತಾ…?

ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರದಂದು ವಿಲಕ್ಷಣ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಬ್ಯಾಂಕಾಕ್ ನಿಂದ ಬಂದಿಳಿದಿದ್ದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಆತನ ಗುದದ್ವಾರದಲ್ಲಿ 31 ಲಕ್ಷ ರೂ. ಮೌಲ್ಯದ ಒಂದು ಕೆಜಿ ಚಿನ್ನ ಪತ್ತೆಯಾಗಿದೆ.

ಈತ ವೃತ್ತಿನಿರತ ಕಳ್ಳಸಾಗಾಣಿಕೆದಾರನಾಗಿದ್ದು, ಹಿಂದೆಯೂ 93.32 ಲಕ್ಷ ರೂ. ಮೌಲ್ಯದ ಸುಮಾರು ಮೂರು ಕೆಜಿಯಷ್ಟು ಚಿನ್ನವನ್ನು ಸಾಗಣೆ ಮಾಡಿದ್ದನೆಂದು ಹೇಳಲಾಗಿದೆ.

ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು, ಚಿನ್ನವನ್ನು ಯಾರಿಗಾಗಿ ಸಾಗಾಟ ಮಾಡುತ್ತಿದ್ದ ಎಂಬುದನ್ನು ಪತ್ತೆ ಮಾಡಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...