alex Certify
ಕನ್ನಡ ದುನಿಯಾ       Mobile App
       

Kannada Duniya

ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಅರೆಸ್ಟ್

ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ 62 ವರ್ಷದ ವ್ಯಕ್ತಿಯನ್ನು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈತ ವಿಸ್ತಾರಾ ಏರ್ಲೈನ್ಸ್ ನ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ್ದನೆನ್ನಲಾಗಿದೆ.

ಮಾರ್ಚ್ 24 ರಂದು ಈ ಘಟನೆ ನಡೆದಿದ್ದು, ಲಕ್ನೋದಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ಏರ್ಲೈನ್ಸ್ ನ ಯುಕೆ-997 ವಿಮಾನ ಏರಿದ್ದ ರಾಜೀವ್ ವಸಂತ್ ದಾನಿ ಎಂಬ ಪ್ರಯಾಣಿಕ ಪ್ರಯಾಣದ ಆರಂಭದಿಂದಲೇ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಲಾರಂಭಿಸಿದ್ದನೆನ್ನಲಾಗಿದೆ.

ವಿಮಾನ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದ ವೇಳೆ ಪ್ರಯಾಣಿಕರ ಮಾರ್ಗದರ್ಶನಕ್ಕಾಗಿ ವಿಮಾನದ ಬಾಗಿಲ ಬಳಿ ನಿಂತಿದ್ದ ಗಗನಸಖಿಗೆ ಅಸಭ್ಯವಾಗಿ ಸ್ಪರ್ಶ ಮಾಡಿದ್ದು, ಆಕೆ ಈ ವಿಚಾರವನ್ನು ಕೂಡಲೇ ತನ್ನ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ. ಅವರುಗಳು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ ಮೇರೆಗೆ ಆತನನ್ನು ತಡೆದು ವಿಚಾರಣೆ ನಡೆಸಿದ ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಬಳಿಕ ರಾಜೀವ್ ವಸಂತ್ ಜಾಮೀನಿನ ಮೇಲೆ ಹೊರ ಬಂದಿದ್ದಾನೆ.

ಘಟನೆ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ವಿಸ್ತಾರಾ ಏರ್ಲೈನ್ಸ್, ಪ್ರಯಾಣಿಕರ ಸುರಕ್ಷತೆ ಜೊತೆ ಜೊತೆಗೆ ಸಿಬ್ಬಂದಿಯೂ ತಮಗೆ ಮುಖ್ಯವಾಗಿದ್ದು, ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...