alex Certify
ಕನ್ನಡ ದುನಿಯಾ       Mobile App
       

Kannada Duniya

ವ್ಯಕ್ತಿಯನ್ನು ಅಟ್ಟಾಡಿಸಿಕೊಂಡು ಬಂದು ನಡುರಸ್ತೆಯಲ್ಲೇ ಬರ್ಬರ ಕೃತ್ಯ

ದೆಹಲಿಯ ಚಿತ್ತರಂಜನ್ ಪಾರ್ಕ್ ಬಳಿ ಬೆಚ್ಚಿ ಬೀಳಿಸುವಂತಹ ಕೃತ್ಯವೊಂದು ನಡೆದಿದೆ. ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಅಟ್ಟಾಡಿಸಿಕೊಂಡು ಬಂದು ಕೊಂದಿದ್ದಾರೆ. ರಾತ್ರಿ 10 ಗಂಟೆ ವೇಳೆಗೆ ಈ ಘಟನೆ ನಡೆದಿದೆ.

ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ದಶರಥ್ ಮುಖಿಯಾ ಅಂತ ಗುರುತಿಸಲಾಗಿದೆ. ಈತ ಗ್ರೇಟರ್ ಕೈಲಾಶ್ ನಲ್ಲಿ ಬಾಣಸಿಗನಾಗಿ ಕೆಲಸ ಮಾಡ್ತಿದ್ದ.

ದುಷ್ಕರ್ಮಿಗಳು ಆತನನ್ನು ಅಟ್ಟಿಸಿಕೊಂಡು ಬಂದು ಎದೆಗೆ ತಿವಿದಿರುವ ದೃಶ್ಯ ಸಿಸಿ ಟಿವಿಯಲ್ಲೂ ಸೆರೆಯಾಗಿದೆ. ದಶರಥ್ ಬಳಿಯಿದ್ದ ಹಣ ಹಾಗೂ ಮೊಬೈಲ್ ಅನ್ನು ಹಂತಕರು ತೆಗೆದುಕೊಂಡು ಹೋಗಿದ್ದಾರೆ. ಆದ್ರೆ ಇದು ದರೋಡೆಗಾಗಿ ನಡೆದ ಹತ್ಯೆಯಲ್ಲ ಅನ್ನೋದು ಪೊಲೀಸರ ಅನುಮಾನ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...