alex Certify
ಕನ್ನಡ ದುನಿಯಾ       Mobile App
       

Kannada Duniya

ಮತ ಕೇಳಲು ಬಂದ ಬಿಜೆಪಿ ಶಾಸಕನಿಗೆ ಚಪ್ಪಲಿ ಹಾರ…!

ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಹಾಲಿ ಶಾಸಕರೊಬ್ಬರು, ಚುನಾವಣಾ ಪ್ರಚಾರ ಕಾರ್ಯ ಕೈಗೊಂಡಿದ್ದ ವೇಳೆ ವ್ಯಕ್ತಿಯೊಬ್ಬ ಅವರಿಗೆ ಚಪ್ಪಲಿ ಹಾರ ಹಾಕಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಗಾಡಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ದಿಲೀಪ್ ಶೇಖಾವತ್ ನವೆಂಬರ್ 28 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮತ್ತೊಮ್ಮೆ ಸ್ಪರ್ಧಿಸಿದ್ದು, ಭಾನುವಾರದಂದು ಕ್ಷೇತ್ರವ್ಯಾಪಿ ಚುನಾವಣಾ ಪ್ರಚಾರ ಕೈಗೊಂಡಿದ್ದರು.

ಈ ವೇಳೆ ಅಭಿಮಾನಿಗಳು ಅವರಿಗೆ ಹೂವಿನ ಹಾರ ಹಾಕಿ ಸ್ವಾಗತಿಸಿದ್ದು, ಇವರುಗಳ ಜೊತೆಯೇ ಕೇಸರಿ ಶಾಲು ಹಾಗೂ ಬಿಜೆಪಿ ಪಕ್ಷದ ಟೋಪಿ ಧರಿಸಿ ಬಂದ ವ್ಯಕ್ತಿಯೊಬ್ಬ ಏಕಾಏಕಿ ಅವರಿಗೆ ಚಪ್ಪಲಿ ಹಾರ ಹಾಕಿದ್ದಾನೆ.

ಇದರಿಂದ ಒಂದು ಕ್ಷಣ ತಬ್ಬಿಬ್ಬಾದ ದಿಲೀಪ್ ಸಿಂಗ್ ಶೇಖಾವತ್, ಬಳಿಕ ಚಪ್ಪಲಿ ಹಾರವನ್ನು ಕಿತ್ತು ಹಾಕಿ ಆತನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...