alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಭಿಣಿ ಪತ್ನಿ ಜೊತೆಯಲ್ಲಿದ್ದಾಗಲೇ ನಡೆದಿದೆ ಭೀಕರ ಕೃತ್ಯ

ಹೈದರಾಬಾದ್: ಅಂತರ್ಜಾತಿ ವಿವಾಹವಾಗಿದ್ದ ಎನ್ನುವ ಕಾರಣಕ್ಕೆ ಗರ್ಭಿಣಿ ಪತ್ನಿಯ ಮುಂದೆಯೇ ಪತಿಯ‌ ಮೇಲೆ‌‌ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ.

ಹೈದರಾಬಾದ್ ನಿಂದ 150 ಕಿ.ಮೀ. ದೂರದ ನಲ್ಗೊಂಡ ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ಹಿಂದೆ ಪ್ರಣಯ್ ಕುಮಾರ್ ಹಾಗೂ ಅಮೃತ ವರ್ಷಿಣಿ ಎಂಬ ಪ್ರೇಮಿಗಳು ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದರು.

ಆದ್ದರಿಂದಲೇ ಪ್ರಣಯ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಅನುಮಾನಿಸಲಾಗಿದೆ. ಪ್ರಣಯ್ ಮೇಲೆ ನಡೆದಿರುವ ಹಲ್ಲೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹಿಂಬದಿಯಿಂದ ಬಂದ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ.

ಆಸ್ಪತ್ರೆಯಿಂದ ಪತಿ, ಪತ್ನಿ ಹೊರ ಬರುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬಳಿಕ ಪತಿಗಾಗಿರುವ ಹಲ್ಲೆ ಬಗ್ಗೆ ಅಮೃತವರ್ಷಿಣಿ ಓಡಿ ಹೋಗಿ ಆಸ್ಪತ್ರೆ ಸಿಬ್ಬಂದಿಗೆ ತಿಳಿಸಿದ್ದು, ಆತ ಅಷ್ಟರಲ್ಲಾಗಲೇ ಮೃತಪಟ್ಟಿದ್ದ ಎಂದು ಪೊಲೀಸರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...