alex Certify
ಕನ್ನಡ ದುನಿಯಾ       Mobile App
       

Kannada Duniya

ವಿಡಿಯೋ ತೋರಿಸಿ ಅತ್ಯಾಚಾರ ಎಸಗಿದ ಕಾಮುಕ

ಅತ್ಯಾಚಾರ ವಿಡಿಯೋ ತೋರಿಸಿ ಯುವತಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಂಪುರ್ ಜಿಲ್ಲೆಯಲ್ಲಿ ನಡೆದಿದೆ.

ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತನ್ನ ನೀಚ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಅದೇ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ 1 ವರ್ಷದಿಂದ ಅತ್ಯಾಚಾರ ಎಸಗಿದ್ದಾನೆ.

ಯುವತಿ ಒಪ್ಪದಿದ್ದಾಗ ರೇಪ್ ವಿಡಿಯೋವನ್ನು ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಸಿದ್ದಾನೆ. ಸಂತ್ರಸ್ಥೆ ಗರ್ಭಿಣಿಯಾಗಿದ್ದು, ಆತನಿಗೆ ಮದುವೆಯಾಗುವಂತೆ ಕೇಳಿದ್ದಾಳೆ.

ಇದಕ್ಕೆ ಒಪ್ಪದಿದ್ದಾಗ, ಪೊಲೀಸರಿಗೆ ದೂರು ನೀಡಿದ್ದಾಳೆ. ರಾಂಪುರ್ ಎ.ಎಸ್.ಪಿ. ಸುಧಾ ಸಿಂಗ್ ಈ ಕುರಿತು ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳಿಸಲಾಗಿದೆ. ಆರೋಪಿ ಮತ್ತು ಆತನ ಕುಟುಂಬದವರು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...